ವರುಣನ ಅಬ್ಬರಕ್ಕೆ ತತ್ತರಿಸಿದ ಚಾಮರಾಜನಗರ

ಚಾಮರಾಜನಗರ 

     ಮೇ 21ರಂದು ಅಬ್ಬರದ ಮಳೆ ಸುರಿದ ಕಾರಣ ರಾಜ್ಯದ ಹಲವೆಡೆ ಸಾಕಷ್ಟು ಅನಾಹುತಗಳು ಸಂಭವಿಸಿವೆ. ಅದೇ ರೀತಿ ಅಬ್ಬರದ ಮಳೆಗೆ ಚಾಮರಾಜನಗರ ಜಿಲ್ಲೆಯ ಹಲವೆಡೆ ಮನೆಗಳು, ದಿನಬಳಕೆ ವಸ್ತುಗಳು, ಕೃಷಿ ಬೆಳೆಗಳು, ಕ್ರೀಡಾಂಗಣ ಸಂಪೂರ್ಣವಾಗಿ ಜಲಾವೃತವಾಗಿವೆ.

     ಇದರಿಂದ ಜಿಲ್ಲೆಯ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಹಾಗಾದರೆ ಜಿಲ್ಲೆಯ ಯಾವ ಭಾಗಗಳಲ್ಲಿ ಹೆಚ್ಚು ಹಾನಿ ಆಗಿದೆ ಎಂದು ಇಲ್ಲಿ ತಿಳಿಯಿರಿ. ಹನೂರು‌ ತಾಲೂಕು ವ್ಯಾಪ್ತಿಯಲ್ಲಿ ವಿವಿಧಡೆ ಭಾನುವಾರ ಸಂಜೆ ಬಿರುಗಾಳಿ ಸಹಿತ ಮಳೆಯಾಗಿದ್ದು, ಕೆಲವಡೆ ಮರಗಳು ಮುರಿದು ಬಿದ್ದಿವೆ. ಇನ್ನೂ ಕೆಲವಡೆ ಮನೆ ಮೇಲ್ಚಾವಣಿ ಹಾರಿ ಹೋಗಿರುವ ಘಟನೆಗಳು ಜರುಗಿವೆ.

     ಪಟ್ಟಣ ಸೇರಿದಂತೆ ತಾಲೂಕಿನ ಸುತ್ತಮುತ್ತ ಭಾನುವಾರ ಸಂಜೆ ಬಿರುಗಾಳಿ ಸಹಿತ ಮಳೆ ಸುರಿದಿರುವ ಪರಿಣಾಮ ಕೆಲವಡೆ ಮರಗಳು ಮುರಿದು ಬಿದ್ದು ಸಂಚಾರಕ್ಕೆ ತೊಂದರೆ ಆಗಿದೆ. ಇದರಿಂದ ವಾಹನ ಸವಾರರು ಪರದಾಡಿದ್ದಾರೆ. ಇನ್ನು ಹನೂರು ಪಟ್ಟಣದಲ್ಲಿ ಬಾಲು ಎಂಬುವವರ ಮನೆ ಮೇಲೆ ಇರುವ ನೀರಿನ ಟ್ಯಾಂಕ್‌ನ ಮೇಲೆ ಮರವೊಂದು ಮುರಿದು ಬಿದ್ದು, ಟ್ಯಾಂಕ್ ಹೊಡೆದು ಹೋಗಿದೆ. ಜೊತೆಗೆ ಮನೆಯ ಮೇಲೆ ಮರ ಬಿದ್ದಿರುವುದರಿಂದ ಗೋಡೆಗೂ ಹಾನಿ ಆಗಿದೆ. 

    ಜನವರಿ 1 ರಿಂದ ಭತ್ತ, ರಾಗಿ ಮತ್ತು ಜೋಳ ಖರೀದಿ ಅಲ್ಲದೇ ಕೆ.ಇ.ಬಿ ಮುಂಭಾಗ ಇರುವ ಬಡಾವಣೆಯೊಂದರ ಕ್ರಷ್ಣ ನಾಯ್ಡು ಎಂಬುವವರ ಮನೆಯ ಸೀಟ್ ಗಾಳಿಗೆ ಹಾರಿ ಹೋಗಿದ್ದು, ಮತ್ತೊಂದೆಡೆ ಮನೆಯಲ್ಲಿದ್ದ ದಿನಬಳಕೆಯ ವಸ್ತುಗಳು ನೀರುಪಾಲಾಗಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap