ಇಂದಿನಿಂದ 3 ದಿನಗಳ ಕಾಲ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷೇಧ!!

ಮೈಸೂರು : 

     ಇಂದಿನಿಂದ ಮೂರು ದಿನಗಳ ಕಾಲ ಚಾಮುಂಡಿ ಬೆಟ್ಟಕ್ಕೆ ಪ್ರವೇಶವನ್ನು ನಿಷೇಧಿಸಲಾಗಿದೆ.

    ಶ್ರಾವಣ ಮಾಸದ ಎರಡನೇ ಶುಕ್ರವಾರ ದಿನವಾದ ಇಂದು (ಆ.20) ವರಮಹಾಲಕ್ಷ್ಮೀ ಹಬ್ಬವನ್ನು ರಾಜ್ಯದೆಲ್ಲೆಡೆ ಬಹಳ ಸಡಗರ ಸಂಭ್ರಮದಿಂದ ಜನರು ಆಚರಿಸುತ್ತಿದ್ದಾರೆ.

      ಹಬ್ಬದ ವಿಶೇಷ ದಿನವಾದ ಶುಕ್ರವಾರ ಮೈಸೂರು ಜಿಲ್ಲೆಯ ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಇಂದಿನಿಂದ ಮೂರು ದಿನಗಳ ಕಾಲ ಚಾಮುಂಡಿ ಬೆಟ್ಟಕ್ಕೆ ಪ್ರವೇಶವನ್ನು ನಿಷೇಧಿಸಲಾಗಿದೆ. ವಾರಾಂತ್ಯ ದಿನಗಳಾದ ಶನಿವಾರ ಮತ್ತು ಭಾನುವಾರವೂ ಜಿಲ್ಲಾಡಳಿತದ ಸೂಚನೆಯಂತೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link