ಹಾಸನ :
ಇತಿಹಾಸ ಪ್ರಸಿದ್ಧ ಶ್ರವಣಬೆಳಗೊಳದ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (73) ಅವರು ಇಂದು ಬೆಳಗ್ಗೆ ಅನಾರೋಗ್ಯದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಇವರು ಅಪಾರ ಭಕ್ತರು ಹಾಗು ಮಠದ ಅನುಯಾಯಿಗಳನ್ನು ಅಗಲಿದ್ದಾರೆ ಎನ್ನಲಾಗಿದೆ .ಹಾಸನ ಜಿಲ್ಲೆಯಲ್ಲಿ ಪ್ರಸಿದ್ಧವಾಗಿದ್ದರಲ್ಲದೆ ಇವರು ಉಸ್ತುವಾರಿ ತೆಗೆದುಕೊಂಡ ಮೇಲೆ ಮಠವು ಅಭಿವೃದ್ಧಿ ಆಗಿದೆ ಎಂದು ಭಕ್ತರು ತಿಳಿಸಿದ್ದಾರೆ.ಸ್ವಸ್ತಿಶ್ರೀ ಚಾರುಕೀರ್ತಿ ಸ್ವಾಮೀಜಿ ಸಾವಿಗೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
