ರಾಮನಗರ, :
ಮನೆಯ ಹೊರಗಡೆ ಮಲಗಿದ್ದ ವೃದ್ಧೆ ಮೇಲೆ ಚಿರತೆಯೊಂದು ದಾಳಿ ಮಾಡಿ ಕೊಂದು ಹಾಕಿರುವ ಘಟನೆ ಮಾಗಡಿ ತಾಲ್ಲೂಕಿನ ಕೊತ್ತಗಾನಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
68 ವರ್ಷದ ಗಂಗಮ್ಮ ಮೃತ ವೃದ್ಧೆ. ಚಿರತೆ ವೃದ್ಧೆಯ ಶವವನ್ನು ಭಾಗಶಃ ತಿಂದಿದ್ದು, ಮನೆಯ ಹತ್ತಿರದಲ್ಲಿ ದೇಹದ ಭಾಗಗಳು ಪತ್ತೆಯಾಗಿವೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ ಮಾಗಡಿ ಪೊಲೀಸರು ಭೇಟಿ ನೀಡಿದ್ದಾರೆ.
ಕಳೆದ ಶನಿವಾರವಷ್ಟೇ ಮಾಗಡಿ ತಾಲ್ಲೂಕಿನ ಕದರಯ್ಯನ ಪಾಳ್ಯದಲ್ಲಿ ಚಿರತೆಯೊಂದು ಮನೆಯೊಳಗೆ ನುಗ್ಗಿ ಮೂರು ವರ್ಷದ ಬಾಲಕನನ್ನು ಎಳೆದೊಯ್ದು ಕೊಂದು ಹಾಕಿತ್ತು.
ಇದೀಗ ಮತ್ತೆ ಚಿರತೆ ದಾಳಿ ಮುಂದುವರೆಸಿದ್ದು, ಸ್ಥಳೀಯರು ಇನ್ನಷ್ಟು ಭಯಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ