ನಿಟ್ಟೂರು :
ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿಯ ಪತ್ರೆಮತ್ತಿಘಟ್ಟ ಸಮೀಪ ವಾಹನವೊಂದು ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಚಿರತೆಯು ಸಾವನ್ನಪ್ಪಿರುವ ಘಟನೆ ಸೆ.2 ರಾತ್ರಿ ನಡೆದಿದೆ.
ಶಿವಮೊಗ್ಗ- ಬೆಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ 206 ನಲ್ಲಿ 8 ವರ್ಷದ ಗಂಡು ಚಿರತೆಗೆ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದೆ. ಅರಣ್ಯ ಇಲಾಖಾ ಆಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಾವಿಗೀಡಾದ ಚಿರತೆಯನ್ನು ತಮ್ಮ ವಶಕ್ಕೆ ಪಡೆದರು.
ಸೆ.2 ರ ರಾತ್ರಿ ಚಿರತೆಯು ಹೆದ್ದಾರಿ ದಾಟಿ ಹೋಗುವ ಸಮಯಕ್ಕೆ ಭಾರಿ ಗಾತ್ರದ ಲಾರಿಗೆ ಸಿಲುಕಿ ಚಿರತೆ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಪ್ರಜಾಪ್ರಗತಿಗೆ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ