ಮುಂಬೈ : ಕೆಮಿಕಲ್ ಫ್ಯಾಕ್ಟರಿಯಲ್ಲಿ ಅನಿಲ ಸೋರಿಕೆ : ನಗರದಲ್ಲಿ ಹೈ ಅಲರ್ಟ್ ಘೋಷಣೆ

ಮುಂಬೈ:

    ಕೆಮಿಕಲ್ ಫ್ಯಾಕ್ಟರಿಯಲ್ಲಿ ಉಂಟಾದ ಅನಿಲ ಸೋರಿಕೆ ಬಳಿಕ ಇಡೀ ನಗರಕ್ಕೆ ವ್ಯಾಪಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.ಮಹಾರಾಷ್ಟ್ರದ ಅಂಬರನಾಥದಲ್ಲಿ ಕೆಮಿಕಲ್ ಕಾರ್ಖಾನೆಯಿಂದ ಅನಿಲ ಸೋರಿಕೆ ಸಂಭವಿಸಿ ಆತಂಕ ಸೃಷ್ಟಿಸಿದೆ. ಕೆಲವೇ ಗಂಟೆಗಳಲ್ಲಿ ವಿಷಕಾರಿ ಅನಿಲ ಇಡೀ ನಗರವನ್ನು ವ್ಯಾಪಿಸಿದ್ದು, ಹಲವು ನಿವಾಸಿಗಳಲ್ಲಿ ಆರೋಗ್ಯ ಏರುಪೇರಾಗಿದೆ ಎಂದು ಹೇಳಲಾಗಿದೆ.

   ಅಂಬರನಾಥ್ ನಗರದಲ್ಲಿ ಗ್ಯಾಸ್ ಲೀಕ್ ನಿಂದಾಗಿ ಗೋಚರತೆ ಕಡಿಮೆಯಾಗಿದ್ದು, ನಿವಾಸಿಗಳಲ್ಲಿ ಕಣ್ಣುಗಳು ಮತ್ತು ಗಂಟಲಿಗೆ ಕಿರಿಕಿರಿಯನ್ನು ಉಂಟುಮಾಡುತ್ತಿದೆ ಎಂದು ನಿವಾಸಿಗಳು ಆರೋಪಿಸಿದ್ದಾರೆ. ಅಲ್ಲದೆ ಇದು 1984 ರ ಭೋಪಾಲ್ ಅನಿಲ ದುರಂತದ ನೆನಪುಗಳನ್ನು ಮರಳಿ ತರುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಅಂತೆಯೇ ಸೋರಿಕೆಯಾಗಿರುವ ವಿಷಾನಿಲ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಜ್ಞರೊಂದಿಗೆ ಚರ್ಚೆ ನಡೆಸಲಾಗುತ್ತಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ತಂಡಗಳನ್ನು ಸಹ ಕಳುಹಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜನರು ಮನೆಯೊಳಗೆ ಇರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Recent Articles

spot_img

Related Stories

Share via
Copy link
Powered by Social Snap