ಗುಬ್ಬಿ
ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿಯ ಕೊಪ್ಪ ಗ್ರಾಮದಲ್ಲಿ ಬುಧವಾರ ಬೆಳಗಿನ ಜಾವ ಮೂರು ವರ್ಷದ ಹೆಣ್ಣು ಚಿರತೆ ಬೋನಿಗೆ ಬಿದ್ದಿದೆ.
ತಾಲ್ಲೂಕಿನಲ್ಲಿ ಈಚೆಗೆ ಚಿರತೆ ಹಾವಳಿ ಹೆಚ್ಚಾಗುತ್ತಿದ್ದು, ಕುರಿ, ಮೇಕೆಗಳ ಮೇಲೆ ದಾಳಿ ನಡೆಸುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿತ್ತು.
ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳನ್ನು ಗ್ರಾಮಸ್ಥರು ಒತ್ತಾಯಿಸಿದ್ದರು. ಚಿರತೆ ಸೆರೆಯಿಂದ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2023/02/Capture3-1.jpg)