ಬೆಂಗಳೂರು:
ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ನಟ ಚೇತನ್ ಅಹಿಂಸಾ ವಿರುದ್ಧ ವಕೀಲ ಆರ್‌ಎಲ್ಎನ್ ಮೂರ್ತಿ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಟ ಚೇತನ್ ಅವರು ತಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್‌ನಲ್ಲಿ ಕೆಂಪೇಗೌಡರ ಬಗ್ಗೆ ಅವಹೇಳನ ಮಾಡಲಾಗಿದೆ ಎಂದು ವಕೀಲ ಆರ್ ಎಲ್ ಎನ್ ಮೂರ್ತಿ ಎಂಬುವರು ದೂರು ನೀಡಿದ್ದು, ‘ನಟ ಎಂದು ಹೇಳಿಕೊಳ್ಳುವ ವಿದೇಶಿ ಪ್ರಜೆಯಾದ ಚೇತನ್ ಅವರಿಂದ ನಾಡಪ್ರಭು ಕೆಂಪೇಗೌಡರಿಗೆ ಅವಹೇಳನವಾಗಿದೆ ಎಂದು ಆರೋಪ ಮಾಡಿದ್ದಾರೆ.
ಕೆಂಪೇಗೌಡ – ಊಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದಾಗಿ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ
ಟಿಪ್ಪು ಸುಲ್ತಾನ್ – ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ, ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ ದುರದೃಷ್ಟವಶಾತ್, ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ/ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ
ಈ ರೀತಿ ನಟ ಚೇತನ್ ಅಹಿಂಸಾ ಅವರು ತನ್ನ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದು, ಇದರಿಂದ ನಾಡಪ್ರಭು ಕೆಂಪೇಗೌಡರಿಗೆ ಅಗೌರವ ಉಂಟಾಗಿದೆ ಎಂದು ಆರೋಪಿಸಿ ವಕೀಲ ಆರ್ ಎಲ್ ಎನ್ ಮೂರ್ತಿ ಅವರು ನೀಡಿರುವ ದೂರಿನ ಮೇಲೆ ಎಫ್ಐಆರ್ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ
