ಬೆಂಗಳೂರು :
ಮತ್ತೊಂದು ವಿಚಾರದಲ್ಲಿ ನಟ ಚೇತನ್ ಅಹಿಂಸಾ ಮುನ್ನೆಲೆಗೆ ಬಂದಿದ್ದಾರೆ. ಅದರಲ್ಲೂ ಅವರು ಮಾಡುವ ಟ್ವೀಟ್‌ಗಳು ತೀವ್ರ ಸಂಚಲನ ಹುಟ್ಟು ಹಾಕುತ್ತವೆ. ಸೋಷಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯವಾಗಿರುವ ಚೇತನ್, ಇದೀಗ ಕಿಚ್ಚ ಸುದೀಪ್ ಬಿಜೆಪಿಗೆ ಬೆಂಬಲ ನೀಡಿದ್ದರ ಬಗ್ಗೆಯೂ ಟ್ವೀಟ್ ಮಾಡಿದ್ದಾರೆ.
ಸುದೀಪ್ ಬಿಜೆಪಿ ಸೇರಲಿದ್ದಾರೆ, ಚುನಾವಣೆಗೂ ಸ್ಪರ್ಧಿಸಲಿದ್ದಾರೆ ಎಂಬ ಅನೇಕ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದವು. ಇದೆಲ್ಲದಕ್ಕೂ ಇಂದು ಸುದೀಪ್ ಸ್ಪಷ್ಟನೆ ಕೊಟ್ಟಾಗಿದೆ. ನಾನು ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಬರುವುದಿಲ್ಲ ಎಂದು ಸುದೀಪ್ ಹೇಳಿದ್ದಾರೆ. ಆದರೆ ತನ್ನ ಆಪ್ತರಾದ ಬೊಮ್ಮಾಯಿ ಅವರಿಗೆ ಬೆಂಬಲ ನೀಡುತ್ತೇನೆ, ಅವರು ಹೇಳಿದವರ ಪರ ಪ್ರಚಾರ ಮಾಡುವೆ ಎಂದು ತಿಳಿಸಿದ್ದಾರೆ.
When the vast majority of our Karnataka people can vote on something as accidental as birth-based caste, why is it problematic when a film star campaigns for a political party on the basis of his personal affinity w/ the CM?
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) April 5, 2023
“ಸಿನಿಮಾ ತಾರೆ ಬಿಜೆಪಿ ಸೇರ್ಪಡೆಯಾದರೆ ಉದಾರವಾದಿಗಳು ಅದನ್ನು ಮಾರಾಟ ಎನ್ನುವುದು ಏಕೆ? ಈ ಉದಾರವಾದಿಗಳು ಈಗಾಗಲೇ ಕಾಂಗ್ರೆಸ್/ಜೆಡಿಎಸ್/ಎಎಪಿ ಅಂತಹ ವ್ಯವಸ್ಥಿತ ರಾಜಕೀಯ ಹಿಂದೂ ಶಕ್ತಿಗಳಿಗೆ ಮಾರಾಟವಾಗಿದ್ದಾರೆ. ನೆನಪಿಡಿ, ಬಿಜೆಪಿ ಮಾತ್ರ ಶತ್ರು ಎಂದು ಹೇಳುವವರು ಸಹ ನಮ್ಮ ಶತ್ರುಗಳೇ. ನಾವು ಅನ್ಯಾಯದ ಮತ್ತು ಅಸಮಾನತೆಯ ಸಂಪೂರ್ಣ ವ್ಯವಸ್ಥೆಯ ವಿರುದ್ಧ ಹೋರಾಡಬೇಕಿದೆ” ಎಂದು ಚೇತನ್ ಅಹಿಂಸಾ ಬರೆದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ