ಮತದಾನ ಜಾಗೃತಿಗೆ ಮುಖ್ಯ ಕಾರ್ಯದರ್ಶಿಯಿಂದ ಚಾಲನೆ ….!

ಬೆಂಗಳೂರು:

    ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶೇಷ ಚೇತನರ ದ್ವಿಚಕ್ರ/ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಚಾಲನೆ ನೀಡಿದ್ದಾರೆ.

    ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ವಿಶೇಷ ಚೇತನರ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ವಿಧಾನಸೌಧದ ಮುಂಭಾಗದಲ್ಲಿ ಜಾಥಾಕ್ಕೆ ಚಾಲನೆ ನೀಡಲಾಯಿತು.

    ಲೋಕಸಭಾ ಚುನಾವಣೆಯಲ್ಲಿ ತಪ್ಪದೆ ಮತದಾನ ಮಾಡಬೇಕು. ಈ ಬಗ್ಗೆ ಜಾಗೃತಿ ಮೂಡಿಸಲು ವಿಶೇಷ ಚೇತನರ ಮೂಲಕ ಜಾಗೃತಿ ಜಾಥಾ ಮಾಡಲಾಯಿತು. ಸಮಾಜದ ಪ್ರತಿಯೊಂದು ವರ್ಗದವರೂ ತಪ್ಪದೆ ಮತದಾನ ಮಾಡುವಂತೆ ಉತ್ತೇಜಿಸುವುದು ಈ ಪ್ರಚಾರದ ಉದ್ದೇಶವಾಗಿದೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.

    ಚುನಾವಣಾ ಆಯೋಗವು ಸಮಾಜದ ಪ್ರತಿಯೊಂದು ವರ್ಗವು ಮತ ಚಲಾಯಿಸಬೇಕು ಎಂಬ ಗುರಿಯನ್ನು ಹೊಂದಿದೆ. ವಿಶೇಷಚೇತನರು, 85 ವರ್ಷ ಮೇಲ್ಪಟ್ಟವರು ಮತ್ತು ತೃತೀಯಲಿಂಗಿಗಳನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲಾಗುತ್ತಿದ್ದು, ತಪ್ಪದೇ ಮತದಾನ ಮಾಡುವಂತೆ ಮನವಿ ಮಾಡಿದರು.

   ಮತಗಟ್ಟೆಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಮೆರವಣಿಗೆಯ ಅಂಗವಾಗಿ ವಿಧಾನಸೌಧದಲ್ಲಿ ವಿಕಲಚೇತನರಿಂದ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನ ರ್ಯಾಲಿ ನಡೆದು ಕೆ.ಆರ್.ವೃತ್ತ, ನೃಪತುಂಗ ರಸ್ತೆ, ಹಡ್ಸನ್ ಸರ್ಕಲ್ ಸೇರಿದಂತೆ ಕಂಠೀರವ ಕ್ರೀಡಾಂಗಣದಲ್ಲಿ ಮುಕ್ತಾಯವಾಯಿತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap