ಬಾಲ್ಯ ವಿವಾಹ ನಿಷೇಧ ಕಾಯ್ದೆ ಅಭಿಯಾನ

ತುಮಕೂರು:

ಮಾ. 6ರಂದು ಉಸ್ತುವಾರಿ ಸಚಿವರಿಂದ ಚಾಲನೆ

ಬಾಲ್ಯವಿವಾಹ ನಿಷೇಧ ಕಾಯ್ದೆಯ ಸಮರ್ಪಕ ಅನುಷ್ಠಾನ ಮತ್ತು ಸಾರ್ವಜನಿಕರಲ್ಲಿ ವ್ಯಾಪಕ ಅರಿವು ಮೂಡಿಸುವ ಸಲುವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ವಾರ್ತಾ ಇಲಾಖೆಯ ವಿಡಿಯೋ ಆನ್ ವೀಲ್ಸ್ ಮೂಲಕ ಜಿಲ್ಲಾದ್ಯಂತ ಹಮ್ಮಿಕೊಂಡಿರುವ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಮಾರ್ಚ್ 6 ರಂದು ಚಾಲನೆ ನೀಡಲಿದ್ದಾರೆ.

ಬಾಲ್ಯವಿವಾಹದಿಂದ ಉಂಟಾಗುವ ದುಷ್ಪರಿಣಾಮಗಳು, ಶಿಕ್ಷೆ ಹಾಗೂ ಬಾಲ್ಯವಿವಾಹ ನಡೆಯದಂತೆ ಕ್ರಮಕೈಗೊಳ್ಳುವ ಬಗ್ಗೆ ನಿರ್ದೇಶನ ನೀಡುವುದು ಈ ಅಭಿಯಾನದ ಮೂಲ ಉದ್ದೇಶವಾಗಿದೆ.

ಅಭಿಯಾನವನ್ನು ಜಿಲ್ಲೆಯ 53 ಹೋಬಳಿಗಳಲ್ಲಿ 41 ದಿನಗಳ ಕಾಲ 205 ಕಾರ್ಯಕ್ರಮಗಳನ್ನು ತಾಲ್ಲೂಕುವಾರು ಆಯೋಜಿಸಲಾಗುವುದು. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು. ಅಭಿಯಾನದಲ್ಲಿ ಭಾಗವಹಿಸಿದವರಿಂದ ಬಾಲ್ಯವಿವಾಹ ನಿಷೇಧ ಪ್ರಮಾಣ ವಚನವನ್ನು ಸ್ವೀಕರಿಸಿ ಸಹಿ ಪಡೆಯಲಾಗುವುದು.

ಸಾರ್ವಜನಿಕರು ಬಾಲ್ಯವಿವಾಹ ಪ್ರಕರಣಗಳ ಬಗ್ಗೆ ಮಾಹಿತಿ ದೊರೆತರೆ ಶೀಘ್ರವಾಗಿ ತಡೆಗಟ್ಟಿ ಬಾಲ್ಯವಿವಾಹ ನಿಷೇದಾಧಿಕಾರಿಗಳಿಗೆ ಮಾಹಿತಿ ಒದಗಿಸುವ ಮೂಲಕ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ್ ಮನವಿ ಮಾಡಿದ್ದಾರೆ.

           ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap