ಫೋನ್ ಕದ್ದಾಲಿಕೆ ಆರೋಪ : ಚಿತ್ರಾ ರಾಮಕೃಷ್ಣಗೆ ಜಾಮೀನು

ನವದೆಹಲಿ: 

     ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್  ಉದ್ಯೋಗಿಗಳ ಅಕ್ರಮ ಫೋನ್ ಕದ್ದಾಲಿಕೆ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಗುರುವಾರ ಚಿತ್ರಾ ರಾಮಕೃಷ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ.

     ಅವರು ಸಲ್ಲಿಸಿದ್ದ ಅರ್ಜಿಯನ್ನು ಅನುಮತಿಸಲಾಗಿದೆ. ಅರ್ಜಿದಾರರಿಗೆ ಜಾಮೀನು ನೀಡಲಾಗಿದೆ ಎಂದು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಹೇಳಿದರು.

    ಎನ್‌ಎಸ್‌ಇ ಸಹ-ಸ್ಥಳ ಹಗರಣದಲ್ಲಿ ಸಿಬಿಐನಿಂದ ಈ ಹಿಂದೆ ಬಂಧಿಸಲ್ಪಟ್ಟಿದ್ದ ಮಾಜಿ ಎನ್‌ಎಸ್‌ಇ ವ್ಯವಸ್ಥಾಪಕ ನಿರ್ದೇಶಕಿಯನ್ನು ಪ್ರಸ್ತುತ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಕಳೆದ ವರ್ಷ ಜುಲೈ 14 ರಂದು ಬಂಧಿಸಿತ್ತು. ಸಿಬಿಐ ಪ್ರಕರಣದಲ್ಲಿ ಆಕೆಗೆ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಹೈಕೋರ್ಟ್ ಜಾಮೀನು ನೀಡಿತ್ತು.

   ಈ ಪಿತೂರಿಯ ಹಿಂದಿನ ಸೂತ್ರಧಾರಿ ಎಂಬ ಕಾರಣಕ್ಕೆ ಜಾರಿ ನಿರ್ದೇಶನಾಲಯ (ಇಡಿ) ಸದ್ಯದ ಪ್ರಕರಣದಲ್ಲಿ ಆಕೆಯ ಜಾಮೀನು ಅರ್ಜಿಯನ್ನು ವಿರೋಧಿಸಿತ್ತು.

    ಚಿತ್ರ ರಾಮಕೃಷ್ಣ ಅವರು 2009 ರಲ್ಲಿ ಎನ್ಎಸ್ಇಯಲ್ಲಿ ಜಂಟಿ ವ್ಯವಸ್ಥಾಪಕ ನಿರ್ದೇಶಕಿಯಾಗಿ ನೇಮಕಗೊಂಡರು ಮತ್ತು 2013ರ ಮಾರ್ಚ್ 31 ರವರೆಗೆ ಆ ಸ್ಥಾನದಲ್ಲಿ ಇದ್ದರು. ಅವರು 2013ರ ಏಪ್ರಿಲ್ 1 ರಂದು ವ್ಯವಸ್ಥಾಪಕ ನಿರ್ದೇಶಕಿಯಾಗಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆಗಿ ಉನ್ನತೀಕರಿಸಲ್ಪಟ್ಟರು. ಎನ್ಎಸ್ಇನಲ್ಲಿ ಅವರ ಅಧಿಕಾರಾವಧಿಯು ಡಿಸೆಂಬರ್ 2016 ರಲ್ಲಿ ಕೊನೆಗೊಂಡಿತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link