ಚಿತ್ರದುರ್ಗ :
ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿ, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜನನಗೊಂಡನಹಳ್ಳಿಯಲ್ಲಿ ನಡೆದಿದೆ
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜನನಗೊಂಡನಹಳ್ಳಿಯಲ್ಲಿ ಟಾಟಾ ಸಫಾರಿ, ಕ್ಯಾಂಟರ್ ವಾಹನ, ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟಾಟಾ ಸಫಾರಿಯಲ್ಲಿದ್ದ ನೇಮಿರಾಜ್, ಪತ್ನಿ ನಂದಾ ಸಾವನ್ನಪ್ಪಿದ್ದಾರೆ. ಕ್ಯಾಂಟರ್ ಚಾಲಕ ರಂಗ ಮೃತ ದುರ್ದೈವಿಗಳು.
ಅಪಘಾತದಲ್ಲಿ ಇಬ್ಬರಿಗೆ ಗಾಯಾಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ