ಮೊದಿ ಆಗಮನಕ್ಕೆ ಕ್ಷಣಗಣನೆ…!

ಬೆಂಗಳೂರು:

     ವಿಧಾನಸಭಾ ಚುನಾವಣೆಗೆ ಹಳೇ ಮೈಸೂರು ಭಾಗದ  ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು  ಮೋದಿ ಒಂದೇ ಕಲ್ಲಿನಲ್ಲಿ ಎರಡೆರಡು ಹಕ್ಕಿ ಹೊಡೆಯಲು ಸಜ್ಜಾಗಿದ್ದಾರೆ ಒಂದು ತಮ್ಮ ಪಕ್ಷದ ಚುನಾವಣಾ ಪ್ರಚಾರ ಮತ್ತೊಂದು ತಮ್ಮ ಡಬಲ್‌ ಇಂಜನ್‌ ಸರ್ಕಾರ ಮಾಡಿದ ಸಾಧನೆಯ ಉದ್ಘಾಟನೆ . ಈ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಮೋದಿ ಅವರು ರಾಜ್ಯದ ಹಲವು ಜಿಲ್ಲೆಗಳಿಗೆ ಇಂದು ಭೇಟಿ ನೀಡಲಿದ್ದಾರೆ ಎನ್ನಲಾಗದೆ ಮತ್ತು ಮೋದಿ ರಾಜ್ಯಕ್ಕೆ ಆಗಮಿಸುವುದಕ್ಕೆ ಕ್ಷಣಗಣನೆ ಆರಂಭವಾಗಿದೆ .

     ಮುಖ್ಯವಾಗಿ ಬಹುನಿರೀಕ್ಷಿತ ಬೆಂಗಳೂರು-ಮೈಸೂರು ಎಕ್ಸ್‍ಪ್ರೆಸ್ ವೇ ಉದ್ಘಾಟನೆ ಸೇರಿದಂತೆ ಸುಮಾರು 16,000 ಕೋಟಿ ರೂ. ಮೌಲ್ಯದ ಯೋಜನೆಗಳ ಲೋಕಾರ್ಪಣೆ ಮಾಡಲಿದ್ದಾರೆ. ಮೈಸೂರು-ಕುಶಾಲನಗರ 4 ಲೇನ್ ಹೆದ್ದಾರಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ಮಾಡಲಿದ್ದು ಮೋದಿ ಆಗಮನದ ಹಿನ್ನಲೆಯಲ್ಲಿ ಸಕ್ಕರೆ ನಾಡು ಮಂಡ್ಯ ಕೇಸರಿಮಯವಾಗಿದೆ.

    ಮಂಡ್ಯ ಭೇಟಿ ನಂತರ ಧಾರವಾಡಕ್ಕೆ ತೆರಳಲಿರುವ ಪ್ರಧಾನಿಮೋದಿ ಅವರು, 5 ಸಾವಿರ ಕೋಟಿ ರೂ. ವೆಚ್ಚದ ವಿವಿಧ ಯೋಜನೆಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 3:15ರ ಸುಮಾರಿಗೆ ಧಾರವಾಡದಲ್ಲಿ ಐಐಟಿ ಕಟ್ಟಡ, ಜಲಜೀವನ ಯೋಜನೆ, ಜಯದೇವ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ. ಜೊತೆಗೆ ಹುಬ್ಬಳ್ಳಿ-ಧಾರವಾಡದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

 ಎಕ್ಸ್‌ಪ್ರೆಸ್ ವೇ : ವ್ಯಾಪಾರಿಗಳಿಗೆ ಲಾಭವೋ ಅಥವಾ  ನಷ್ಟವೋ….?

    ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇ ನಿರ್ಮಾಣವಾದಾಗಿನಿಂದ ಹಳೆ ಮಾರ್ಗದಲ್ಲಿ ವಾಹನ ಸಂಚಾರ ಕಡಿಮೆಯಾಗಿದೆ. ಇದರಿಂದಾಗಿ ರಸ್ತೆ ಬದಿ ಆಹಾರ ಇನ್ನಿತರ ವ್ಯಾಪಾರಿಗಳು ನಷ್ಟವನ್ನು ಅನುಭವಿಸುತ್ತಿದ್ದಾರೆನ್ನುವ ದೂರುಗಳು ಕೇಳಿ ಬಂದಿವೆ. ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್ ದಶಪಥ ರಸ್ತೆಯಿಂದಾಗಿ ಸಾರ್ವಜನಿಕರಿಗೆ ಅನಾನುಕೂಲವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap