ಮೈಸೂರು :
ನಾಡ ದೇವತೆ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಗೆ ಸಿಎಂ ಮತ್ತು ಡಿಸಿಎಂ ಭೇಟಿ ನೀಡಿ ಬೆಳಗ್ಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ವಿಧಾನಸಭೆ ಚುನಾವಣೆಗೆ ಮೊದಲು ಮೇ 9ರಂದು ಗ್ಯಾರಂಟಿಗಳ ಈಡೇರಿಕೆಗೆ ಶಕ್ತಿ ನೀಡುವಂತೆ ಸಿದ್ದರಾಮಯ್ಯ, ಡಿ.ಕೆ.
ಶಿವಕುಮಾರ್, ಕೆ.ಜೆ.ಜಾರ್ಜ್, ವಿಧಾನ ಪರಿಷಬೆಂಗಳೂರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾಡ ದೇವತೆ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಗೆ ಭೇಟಿ ನೀಡಿ ಮಂಗಳವಾರ ಬೆಳಗ್ಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ವಿಧಾನಸಭೆ ಚುನಾವಣೆಗೆ ಮೊದಲು ಮೇ 9ರಂದು ಗ್ಯಾರಂಟಿಗಳ ಈಡೇರಿಕೆಗೆ ಶಕ್ತಿ ನೀಡುವಂತೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಅವರು ಪೂಜೆ ಸಲ್ಲಿಸಿದ್ದರು. ಸರ್ಕಾರ ಅಧಿಕಾರಕ್ಕೆ ಬಂದರೆ ಗ್ಯಾರಂಟಿಗಳ ಈಡೇರಿಸುವುದಾಗಿ ಗ್ಯಾರಂಟಿ ಪತ್ರವನ್ನು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಇಟ್ಟು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಪ್ರಮಾಣ ಮಾಡಿದ್ದರು.
ಇದೀಗ ರಾಜ್ಯ ಸರ್ಕಾರ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವತ್ತ ಹೆಜ್ಜೆ ಹಾಕಿದೆ. ಹೀಗಾಗಿ ಈ ಶಕ್ತಿ ನೀಡಿದ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲು ಮಂಗಳವಾರ ಬೆಳಗ್ಗೆ 9 ಗಂಟೆಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ ಅವರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಸಾಥ್ ನೀಡಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ