ತುಮಕೂರು:
ಕೊರೊನಾ ಮೂರನೇ ಅಲೆ ನಿಯಂತ್ರಣಕ್ಕೆ ಸಧ್ಯ ಜಾರಿಯಲ್ಲಿರುವ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ವಿಸ್ತರಣೆ ಸೇರಿದಂತೆ ಕೋವಿಡ್ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಇಂದು ಮಧ್ಯಾಹ್ನ 1 ಗಂಟೆಗೆ ತಜ್ಞರೊಂದಿಗೆ ಮಹತ್ವದ ಸಭೆ ನಡೆಯಲಿದೆ.
ಸಭೆಯಲ್ಲಿ ಕೋವಿಡ್ ಸ್ಥಿತಿಗತಿ, ಈಗಾಗಲೇ ನಾವು ಕೈಗೊಂಡಿರುವ ಕ್ರಮ, ಅದರ ಪರಿಣಾಮ, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಎಲ್ಲವನ್ನು ವೈಜ್ಞಾನಿಕ ದೃಷ್ಟಿಕೋನದಿಂದ ಪರಿಶೀಲಿಸಿ ನಿರ್ಧರಿಸಲಾಗುವುದು ಎಂದರು.
ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ವಿಸ್ತರಣೆ ಬಗ್ಗೆಯೂ ಇಂದಿನ ಸಭೆಯಲ್ಲಿ ಎಲ್ಲರ ಸಲಹೆ ಸೂಚನೆಗಳನ್ನು ಪಡೆದು ತೀರ್ಮಾನಿಸಲಾಗುವುದು ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ