ST’ ಮೀಸಲಾತಿ ಹೆಚ್ಚಳದ ಕುರಿತಂತೆ ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ

ಬೆಂಗಳೂರು :

ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಒಲವು ತೋರಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆಮೀಸಲಾತಿ ಹೆಚ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಸಚಿವರು, ಕಾನೂನು ತಜ್ಞರುಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವ ಬಗ್ಗೆಯೂ ಚರ್ಚೆಯಾಗಿದೆ. 7.5 % ಗೆ ಮೀಸಲಾತಿಯನ್ನು ಹೆಚ್ಚಿಸಬೇಕೆಂದು ಸಮುದಾಯವರ ಬೇಡಿಕೆಯಿದೆ. ಅವರ ಜನಸಂಖ್ಯೆಯೂ ಹೆಚ್ಚಾಗಿದೆ. ಹಿಂದಿನ ಸರ್ಕಾರ ಈ ಕುರಿತು ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ರಚಿಸಿತ್ತು. ಯಡಿಯೂರಪ್ಪ ಅವರ ಸರ್ಕಾರದಲ್ಲಿ ಸಮಿತಿ ವರದಿ ಸಲ್ಲಿಸಿದೆ. ವರದಿಯಲ್ಲಿ ಎಸ್.ಸಿ ಮತ್ತು ಎಸ್. ಟಿ ಗೆ ಮೀಸಲಾತಿ ಹೆಚ್ಚಿಸಬೇಕೆಂದು ಶಿಫಾರಸ್ಸು ಮಾಡಲಾಗಿದೆ. ಅದರಂತೆ ನಿರ್ಣಯ ತೆಗೆದುಕೊಳ್ಳಬೇಕು ಎಂದರು.

ಪೊಲೀಸರಿಗೆ ಪಾಸ್‌ಪೋರ್ಟ್ ಮುಟ್ಟುಗೋಲು ಅಧಿಕಾರವಿಲ್ಲ: ಹೈಕೋರ್ಟ್

ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ವರದಿ, ಮಹಾರಾಷ್ಟ್ರದ ಜಯಶ್ರೀ ಪಾಟೀಲ್ ಪ್ರಕರಣ ಹಾಗೂ ಇಂದಿರಾ ಸಹಾನಿ ಪ್ರಕರಣಗಳ ತೀರ್ಪುಗಳ ಹಿನ್ನೆಲೆಯಲ್ಲಿ ಹಾಗೂ ನ್ಯಾಯಮೂರ್ತಿ ಸುಭಾಷ್ ಅಡಿ ಅವರಿಂದಲೂ ಮಧ್ಯಂತರ ವರದಿ ಪಡೆದು ಈ ಜನಾಂಗಕ್ಕೆ ಮೀಸಲಾತಿ ಹೆಚ್ಚು ಮಾಡುವ ಮೂಲಕ ನ್ಯಾಯವನ್ನು ಕೊಡಬೇಕೆಂಬ ತೀರ್ಮಾನವಾಗಿದೆ ಎಂದರು.

ಮೀಸಲಾತಿ ಕೊಡುವುದಾದರೆ ಸಂವಿಧಾನಾತ್ಮಕವಾಗಿ ಹಾಗೂ ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ನೀಡಬೇಕು. ಆ ನಿಟ್ಟಿನಲ್ಲಿ ಕೂಡಲೇ ಅಡ್ವೊಕೇಟ್ ಜನರಲ್ ಅವರಿಗೆ ಮೂರೂ ವರದಿಗಳ ಬಗ್ಗೆ ವರದಿ ನೀಡಲು ತಿಳಿಸಲಾಗಿದೆ. ಅದನ್ನು ಸರ್ವ ಪಕ್ಷಗಳ ಸಭೆಯಲ್ಲಿಟ್ಟು, ಒಪ್ಪಿಗೆ ಪಡೆಯಲಾಗುವುದು ಎಂದರು.

2 ಎ ವರ್ಗಕ್ಕೆ ಸೇರಿರುವ ಕುರುಬ ಸಮಾಜದವರು ಪರಿಶಿಷ್ಟ ಪಂಗಡಕ್ಕೆ ಸೇರಬೇಕೆಂಬ ಬೇಡಿಕೆ ಇದೆ. ಕೆಲವರು 3 ಬಿ ನಲ್ಲಿರುವವರು 2 ಎ ವರ್ಗಕ್ಕೆ ಸೇರಬೇಕು, 3 ಬಿ ನಲ್ಲಿ ಇಲ್ಲದವರು, 3 ಬಿ ವರ್ಗಕ್ಕೆ ಸೇರಬೇಕು ಎಂಬ ಬೇಡಿಕೆ ಇದೆ. ಈ ಹಿನ್ನೆಲೆಯಲ್ಲಿ ಹಂತ ಹಂತವಾಗಿ ನಾವು ಮುಂದುವರೆಯಬೇಕು.

ರಾಜಕೀಯಕ್ಕಿಂತ ಕಾವೇರಿಯೇ ಮುಖ್ಯ: ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಒಗ್ಗಟ್ಟು ಪ್ರದರ್ಶನ

ಮೂಲಭೂತವಾಗಿ 50% ದಾಟಬೇಕೋ, ದಾಟಿದರೆ ಕಾನೂನಿನ ರೀತಿ ಹೇಗೆ ಮಾಡಬೇಕು ಎನ್ನುವ ವಿಚಾರವಿದೆ. ಮೊದಲು ನಾಗಮೋಹನ್ ದಾಸ ವರದಿ ಆಧಾರದ ಮೇಲೆ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು. ಆದಷ್ಟು ಶೀಘ್ರವಾಗಿ ನ್ಯಾಯಮೂರ್ತಿ ಸುಭಾಷ್ ಅಡಿಯವರ ವರದಿಯನ್ನು ಪಡೆದು, ನಂತರ ಸರ್ವಪಕ್ಷ ಸಭೆಯ ಮುಂದಿಡಲಾಗುವುದು. ನಂತರ ವಿಧಾನಸಭೆಯಲ್ಲಿ ಮಂಡಿಸಿ ನ್ಯಾಯ ಒದಗಿಸುವ ತೀರ್ಮಾನ ಮಾಡಲಾಗುವುದು ಎಂದರು.

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap