ಬೆಂಗಳೂರು :
ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಸಿಎಂ ಬೊಮ್ಮಾಯಿ ಅವರು ಕೊರೊನಾ ಸೋಂಕಿಗೆ ಒಳಗಾಗಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ ಅವರು, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
ಮುಖ್ಯಮಂತ್ರಿಯವರು ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿ ಧನ್ಯವಾದ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
