ನೀತಿ ಸಂಹಿತೆ ಹಿನ್ನಲೆ : ಸಿಎಂ ಸರ್ಕಾರಿ ಕಾರ್ಯಕ್ರಮ ರದ್ದು…!

ಬೆಂಗಳೂರು

    ಚುನಾವಣಅ ಆಯೋಗ ವಿಧಾನ ಸಭೆ ಚುನಾವಣೆ ಘೋಷಿಸಲು ಸಜ್ಜಾಗುತ್ತಿರುವ ತರುಣದಲ್ಲಿ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಎಎಪಿ ಪಕ್ಷಗಳು ಕರ್ನಾಟಕ ಚುನಾವಣಾ ಅಖಾಡಕ್ಕೆ ಸಿದ್ಧತೆ ನಡೆಸುತ್ತಿದೆ. ಮತ್ತೊಂದೆಡೆ ಇಂದಿನಿಂದಲೇ ನೀತಿಸಂಹಿತೆ ಜಾರಿಯಾಗುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಿವೆ ಎಂದು ಸಿಎಂ ಕಛೇರಿ ತಿಳಿಸಿದೆ.

     ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿಯವರು ಕೊಪ್ಪಳ ಹಾಗೂ ತವರು ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ನೀರಾವರಿ ಯೋಜನೆಗೆ ಚಾಲನೆ ನೀಡಲು ಕಾರ್ಯಕ್ರಮ ನಿಗಧಿಯಾಗಿತ್ತು.

     ಹಾಗೆಯೇ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ಹಾಗೂ ಶಿಗ್ಗಾಂವಿ, ರಾಣೆಬೆನ್ನೂರಿನಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವೂ ಕೂಡ ರದ್ದುಪಡಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ