ಮೇ 10 ರಂದು ಸಿಎಂ ಬದಲಾವಣೆಯಾಗುತ್ತದೆ; ಶಾಸಕ ಯತ್ನಾಳ್‌

ವಿಜಯಪುರ:

 ಒಂದು ಕಡೆ ಚುನಾವಣೆ ಹತ್ತಿರಕ್ಕೆ ಬರುತ್ತಿದೆ. ಮತ್ತೊಂದು ಕಡೆ ರಾಜ್ಯ ಸಂಪುಟ ವಿಸ್ತರಣೆಗೆ ಕಸರತ್ತು ನಡೆಯುತ್ತಿದೆ. ಈ ನಡುವೆ ಸಿಎಂ ಬದಲಾವಣೆ ಬಗ್ಗೆ ಮಾತುಗಳು ಕೇಳಿ ಬರುತ್ತಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಈ ಬಗ್ಗೆ ವಿಜಯಪುರದಲ್ಲಿ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು, ಸಿಎಂ ಬದಲಾವಣೆ ಕುರಿತು ವರಿಷ್ಠರು ಚರ್ಚಿಸುತ್ತಿದ್ದಾರೆ. ಮೇ 10ರಂದು ಮುಖ್ಯಮಂತ್ರಿ ಬದಲಾವಣೆ ಆಗಬಹುದು ಎಂದು ಹೇಳಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ

ಪಕ್ಷದ ಹಿತದೃಷ್ಟಿಯಿಂದ ಹಾಗೂ ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯ ನಿರ್ಣಯವನ್ನು ಪಕ್ಷದ ವರಿಷ್ಠರು ತೆಗೆದುಕೊಳ್ಳುತ್ತಾರೆ. ಸಿಎಂ ಬದಲಾವಣೆ ಕುರಿತು ಚರ್ಚೆಯಾಗುತ್ತಿದೆ. ಪ್ರಧಾನಿ ಅಂತಿಮ ತೀರ್ಮಾನ ಮಾಡುತ್ತಾರೆ ಎಂದು ಯತ್ನಾಳ್‌ ಇದೇ ವೇಳೆ ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ