ಬೆಂಗಳೂರು :
ಕೋವಿಡ್-19 ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಎರಡನೇ ಬಾರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಪುನಃ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಅವರಿಗೆ ನೆಗೆಟಿವ್ ಬಂದಿರುವುದರಿಂದ ಮಣಿಪಾಲ್ ಆಸ್ಪತ್ರೆಯಿಂದ ಇಂದು ಬಿಡುಗಡೆ ಯಾಗಿದ್ದಾರೆ. ಈ ಮೂಲಕ 78 ವರ್ಷದ ಮುಖ್ಯಮಂತ್ರಿ ಯಡಿಯೂರಪ್ಪನವರು ಎರಡನೇ ಬಾರಿಗೆ ಕೊರೋನಾ ಸೋಂಕಿನಿಂದ ಗೆದ್ದು ಬಂದಿದ್ದಾರೆ.
ಕಳೆದ ವಾರ ಯಡಿಯೂರಪ್ಪನವರಿಗೆ ಕೊರೊನಾ ಪಾಸಿಟವ್ ಕಾಣಿಸಿಕೊಂಡಿದ್ದರಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಪಟ್ಟಿದ್ದರು. ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಕೆಲ ದಿನಗಳ ಮಟ್ಟಿಗೆ ಮನೆಯಲ್ಲೇ ಹೋಂ ಕ್ವಾರಂಟೈನ್‍ಗೆ ಒಳಗಾಗಲಿದ್ದಾರೆ ಎಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ