ವಿಜಯಪುರ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಆರ್ ಪಾಟೀಲ್ ಅವರು ಪತ್ರ ಬರೆದಿದ್ದು, ಅದರ ಬಗ್ಗೆ ಅವರೇ ನಿರ್ಣಯ ಕೈಗೊಳ್ಳುತ್ತಾರೆಂದು ಸಚಿವ ಕೃಷ್ಣ ಬೈರೇಗೌಡ ಅವರು ಬುಧವಾರ ಹೇಳಿದರು.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸದನದಲ್ಲಿ ಏನು ಹೇಳಿದ್ದೇನೆ ಎಂಬುದರ ಬಗ್ಗೆ ಮಾಹಿತಿ ಇದೆ. ನಿಮಗೆ ಕೊಡುತ್ತೇನೆ. ಅದನ್ನು ನೀವೂ ನೋಡಿ. ನಂತರ ನೀವೇ ನಿರ್ಧರಿಸಿ ಎಂದು ಹೇಳಿದರು.
ಬಿಆರ್. ಪಾಟೀಲ್ ಅವರ ಹೇಳಿಕೆಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಈ ವಿಚಾರದಲ್ಲಿ ನನ್ನನ್ನು ಸಿಎಂ ಸಂಪರ್ಕಿಸಿಲ್ಲ. ಬಿಆರ್ ಪಾಟೀಲ್ ಪತ್ರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೇ ನಿರ್ಧಾರ ಮಾಡುತ್ತಾರೆ ಎಂದು ತಿಳಿಸಿದರು.