ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯೂ ಇಲ್ಲ : ಸಿಎಂ

ಬೆಂಗಳೂರು

     ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನನ್ನು ಇನ್ನೂ ಆಯ್ಕೆ ಮಾಡದಿರುವುದು ಬಿಜೆಪಿಯಲ್ಲಿನ ಗುಂಪುಗಾರಿಕೆಯನ್ನು ತೋರಿಸುತ್ತದೆ. ಇಷ್ಟಕ್ಕೂ ಅದು ‘ಅತ್ಯಂತ ಅಶಿಸ್ತಿನ’ ರಾಜಕೀಯ ಪಕ್ಷ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಕೂಡ ಇದೇ ವಿಚಾರ ಮುಂದಿಟ್ಟುಕೊAಡು ಬಿಜೆಪಿಯನ್ನು ಹಂಗಿಸಿದೆ.

    ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಗುಂಪುಗಾರಿಕೆ ಇದೆ ಎಂಬುದನ್ನು ಇದು ಸ್ಪಷ್ಟವಾಗಿ ತೋರಿಸುತ್ತದೆ. ಬಿಜೆಪಿ ತಮ್ಮನ್ನು ಶಿಸ್ತಿನ ಪಕ್ಷ ಎಂದು ಕರೆದುಕೊಳ್ಳುತ್ತದೆ. ಆದರೆ, ಅದು ಅತ್ಯಂತ ಅಶಿಸ್ತಿನ ಪಕ್ಷ ಎಂದು ಆರೋಪಿಸಿದರು. ಈ ನಡುವೆ ಕಾಂಗ್ರೆಸ್ ಪಕ್ಷ ಕೂಡ ಸರಣಿ ಟ್ವೀಟ್ ಗಳ ಮೂಲಕ ವಿಪಕ್ಷ ನಾಯಕನ ಆಯ್ಕೆ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿಯನ್ನು ಕುಟುಕಿದೆ.

    ಸರ್ಕಾರ ರಚನೆ ಆಯ್ತು, ನಮ್ಮ ಸರ್ಕಾರ ಟೆಕಾಫ್ ಆಗಿ ಹಲವು ದಿನಗಳಾಯ್ತು, ನಮ್ಮ ಗ್ಯಾರಂಟಿ ಯೋಜನೆಗಳ ಜಾರಿಯೂ ಆಯ್ತು. ಸದನವೂ ಪ್ರಾರಂಭವಾಯ್ತು. ಎಲ್ಲಿ ನಿಮ್ಮ ವಿರೋಧ ಪಕ್ಷದ ನಾಯಕ? ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ ಎಂದರೆ ಎಂತಹ ಹಿನಾಯ ಸ್ಥಿತಿಯಲ್ಲಿದೆ? ಎಂದು ವಾಗ್ದಾಳಿ ನಡೆಸಿದೆ.

   ಬಿಜೆಪಿಯ 66 ಶಾಸಕರಲ್ಲಿ ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇರುವ ಒಬ್ಬೇ ಒಬ್ಬ ಶಾಸಕನಿಲ್ಲದಿರುವುದು ಅತ್ಯಂತ ನಾಚಿಕೆಗೇಡು. ಕರ್ನಾಟಕದ ಇತಿಹಾಸದಲ್ಲಿ ವಿರೋಧ ಪಕ್ಷದ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನ ಇದು. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಪ್ರಜಾಪ್ರಭುತ್ವವನ್ನು ಗೌರವಿಸಲಿಲ್ಲ, ವಿಪಕ್ಷದಲ್ಲಿದ್ದಾಗಲೂ ಗೌರವಿಸುತ್ತಿಲ್ಲ ಎಂದು ಕಿಡಿಕಾರಿದೆ.

   ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯೂ ಇಲ್ಲ. ವಿರೋಧ ಪಕ್ಷದ ನಾಯಕನಿಲ್ಲದೆ ಕಲಾಪ ನಡೆಯುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ. ಈ ಕಪ್ಪು ಚುಕ್ಕೆಯನ್ನಿಟ್ಟಿದ್ದು ಬಿಜೆಪಿ ಎಂದಿದೆ.

   ವಿರೋಧ ಪಕ್ಷದ ನಾಯಕನ ಹುದ್ದೆಯನ್ನೂ ಮಾರಾಟಕ್ಕೆ ಇಡಲಾಗಿದೆಯೇ?. ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ರೂ. ಫಿಕ್ಸ್ ಮಾಡಲಾಗಿತ್ತು. ಈಗ ವಿರೋಧ ಪಕ್ಷದ ನಾಯಕನ ಹುದ್ದೆ ಎಷ್ಟಕ್ಕೆ ಬಿಕರಿಯಾಗುತ್ತಿದೆ? ಆ ಚೌಕಾಶಿ ವ್ಯವಹಾರಕ್ಕಾಗಿಯೇ ಆಯ್ಕೆ ಪ್ರಕ್ರಿಯೆ ವಿಳಂಬವಾಗುತ್ತಿ ದೆಯೇ? ಎಂದಿರುವ ಕಾಂಗ್ರೆಸ್ ಇದಕ್ಕೆ ಬಿಜೆಪಿ ಉತ್ತರಿಸಬೇಕು ಎಂದು ಹೇಳಿದೆ.

   ಪ್ರೀತಿಯ ಬಿಜೆಪಿ, ಸದನ ಪ್ರಾರಂಭವಾಗುವ ಮೊದಲೇ ವಿರೋಧ ಪಕ್ಷದ ನಾಯಕನನ್ನು ವರಿಷ್ಠರು ಆಯ್ಕೆ ಮಾಡುತ್ತಾರೆ ಎಂದು ಗ್ಯಾರಂಟಿ ನೀಡಿದ್ದಿರಿ. ನಿಮ್ಮ ಹೈಕಮಾಂಡ್ ಕನಿಷ್ಠ ವಿರೋಧ ಪಕ್ಷದ ನಾಯಕನ ಆಯ್ಕೆಯಲ್ಲೂ ನಿಮಗೆ ಗ್ಯಾರಂಟಿ ನೀಡದಿರುವುದು ರಾಜಕೀಯ ಇತಿಹಾಸದಲ್ಲಿಯೇ ಅತ್ಯಂತ ಶೋಚನಿಯ ಸಂಗತಿ. ಪಾಪ! ಎಂದು ಕಾಂಗ್ರೆಸ್ ಬಿಜೆಪಿ ಮಾಡಿದ್ದ ಟ್ವೀಟ್‌ನ ಸ್ಕಿçÃನ್ ಶಾಟ್ ಹಂಚಿಕೊಂಡಿದೆ.

   ವಿಧಾನಮಂಡಲದ ಬಜೆಟ್ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಬಿಜೆಪಿ ಇನ್ನೂ ಕೆಳಮನೆಯಲ್ಲಿ ತನ್ನ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಕೇಂದ್ರ ಸಚಿವ ಮನ್‌ಸುಖ್ ಮಾಂಡವಿಯಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರನ್ನು ಕೇಂದ್ರದ ಚುನಾವಣಾ ವೀಕ್ಷಕರನ್ನಾಗಿ ನೇಮಿಸಿದ್ದಾರೆ.

   ಬಿಜೆಪಿಯ ಮುಖ್ಯ ವಕ್ತಾರ ಮತ್ತು ರಾಜ್ಯಸಭಾ ಸಂಸದ ಅನಿಲ್ ಬಲುನಿ ಮಾತನಾಡಿ, ಇಬ್ಬರು ಕೇಂದ್ರ ನಾಯಕರು ರಾಜ್ಯಕ್ಕೆ ಭೇಟಿ ನೀಡಲಿದ್ದು, ರಾಜ್ಯ ವಿಧಾನಸಭೆಯಲ್ಲಿ ಪಕ್ಷದ ನಾಯಕನನ್ನು ಅದರ ಶಾಸಕರು ಆಯ್ಕೆ ಮಾಡುತ್ತಾರೆ ಎಂದಿದ್ದಾರೆ.

    ರಾಜ್ಯ ಚುನಾವಣೆಯಲ್ಲಿ ಸೋತ ನಂತರ, ಬಿಜೆಪಿ ಇನ್ನೂ ವಿಧಾನಸಭೆಯಲ್ಲಿ ತನ್ನ ನಾಯಕನನ್ನು ಆಯ್ಕೆ ಮಾಡಿಲ್ಲ. ಬಜೆಟ್ ಅಧಿವೇಶನ ಆರಂಭವಾಗಿದ್ದರೂ, ವಿರೋಧ ಪಕ್ಷದ ನಾಯಕನನ್ನು ನೇಮಿಸಲು ಹೈಕಮಾಂಡ್ ತಮ್ಮ ಆಯ್ಕೆಗಳನ್ನು ಅಳೆದು ತೂಗುವಲ್ಲಿ ನಿರತವಾಗಿದೆ.

    ರಾಜ್ಯದಲ್ಲಿ ಜಾತಿ ಸಮೀಕರಣವನ್ನು ಸರಿದೂಗಿಸಿಕೊಂಡು ಹಳೆ ನಾಯಕನಿಗೆ ಅಂಟಿಕೊಳ್ಳಬೇಕೋ ಅಥವಾ ಹೊಸ ನಾಯಕನ ಮೇಲೆ ನಂಬಿಕೆ ಇಡಬೇಕೋ ಎಂಬುದನ್ನು ನಿರ್ಧರಿಸಲು ಬಿಜೆಪಿ ಉದ್ದೇಶಿಸಿರುವ ಕಾರಣ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದಾರೆ.

    224 ಸದಸ್ಯ ಬಲದ ವಿಧಾನಸಭೆಗೆ ಮೇ ತಿಂಗಳಿನಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬಂದರೆ, ಬಿಜೆಪಿ 66 ಮತ್ತು ಜೆಡಿಎಸ್ 19 ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap