ಬಿಜೆಪಿಗೆ ಸವಾಲೆಸೆದ ಸಿಎಂ: ಆ ಸವಾಲಾದರು ಏನು…?

ಕಲಬುರಗಿ

     ಬಿಜೆಪಿಗೆ ತಾಕತ್ತಿದ್ದರೆ ಐದು ಗ್ಯಾರಂಟಿಗಳನ್ನು ಇಡೀ ದೇಶದ ಎಲ್ಲಾ ರಾಜ್ಯಗಳಲ್ಲಿ ಜಾರಿ ಮಾಡುವ ತೀರ್ಮಾನವನ್ನು ಮಾಡಲಿ ಎಂದು ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು. ಶನಿವಾರ ಕಲಬುರಗಿಯಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ನಾವು ಅಧಿಕಾರಕ್ಕೆ ಬಂದು ಎರಡೂವರೆ ತಿಂಗಳಲ್ಲಿ ಭರವಸೆಗಳನ್ನು ಈಡೇರಿಸಿದ್ದೇವೆ. ಅದಕ್ಕೆ ಪೂರಕವಾಗಿ ಬಜೆಟ್‌ನಲ್ಲಿ ಅನುದಾನವನ್ನೂ ಘೋಷಿಸಿದ್ದೇವೆ. ಪ್ರಧಾನಿ ಮೋದಿ ಅವರು ಹೇಳಿರುವಂತೆ, ಯೋಜನೆಗಳನ್ನು ಜಾರಿ ತಂದು ನಾವು ದಿವಾಳಿ ಆಗುವುದಿಲ್ಲ.

    ಈಗ ನಾವು ಜಾರಿಗೊಳಿಸಿರುವಂಥ ಗ್ಯಾರಂಟಿಗಳನ್ನು ಇಡೀ ದೇಶದಲ್ಲಿ ಜಾರಿ ತನ್ನಿ ಎಂದು ಪ್ರಧಾನಿಗೆ ಸವಾಲು ಹಾಕುತ್ತೇನೆ. ಗುಜರಾತ್‌ ಮಾಡಲ್ ಎಂದು ದೇಶದ ಜನರಿಗೆ ಭ್ರಮೆ ಹುಟ್ಟಿಸಿದ್ದರು. ಆದರೆ, ನಮ್ಮ ರಾಜ್ಯವನ್ನು ಗುಜರಾತ್ ಮಾಡಲು ನಾವು ಬಿಡುವುದಿಲ್ಲ. ನಮ್ಮದೇ ಆದ ಕರ್ನಾಟಕ ಮಾಡಲ್ ಮಾಡಿದ್ದೇವೆ. ನುಡಿದಂತೆ ನಡೆಯುವುದೇ ಕರ್ನಾಟಕ ಮಾಡಲ್‌ ಎಂದು ಹೇಳಿದರು.

   ಡಿಕೆಶಿಯ ‘ಕುರ್ಚಿಗಾಗಿ ಹೋರಾಟವನ್ನು ವಿವರಿಸಿದ BJP ಅನ್ನ ಭಾಗ್ಯ ಯೋಜನೆಯ‌ ಜಾರಿಗೆ ವಿಚಾರದಲ್ಲಿ ಅಕ್ಕಿ ನೀಡದ ಕೇಂದ್ರ ಸರ್ಕಾರ ಬಡವರ ವಿರೋಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಸಿಎಂ, ಎಫ್ ಸಿ ಐ ಮೊದಲು ಅಕ್ಕಿ ಕೊಡುವುದಾಗಿ ಹೇಳಿ ಆಮೇಲೆ‌ ನಿರಾಕರಿಸಿತು. ಬಿಜೆಪಿಗರು ಈ‌ ವಿಚಾರದಲ್ಲಿ ರಾಜಕೀಯ ಮಾಡಿದರು ನಿಮಗೆ ನಾಚಿಕೆಯಾಗುವುದಿಲ್ಲವೇ ? ಎಂದರು.

   ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿಗೊಳಿಸುತ್ತದೆ ಆದರೆ ಅಭಿವೃದ್ದಿ ಮಾಡುವುದಿಲ್ಲ ಎಂದು ಮೋದಿ ಹೇಳಿದ್ದಾರೆ, ನಾವು ಗ್ಯಾರಂಟಿ ಜಾರಿಗೊಳಿಸುವುದರ ಜೊತೆಗೆ ಅಭಿವೃದ್ದಿಯನ್ನೂ ಕೂಡಾ ಮಾಡಲಿದ್ದೇವೆ.‌ ಸೋನಿಯಾಗಾಂಧಿ, ರಾಹುಲ್ ಗಾಂಧಿ ಅವರಿಗೆ ನಾವು ಕೊಟ್ಟ ಭಾಷೆಯಂತೆ ಜನರಿಗೆ‌ ನೀಡಿದ ವಾಗ್ಧಾನದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತೇವೆ. ನಮ್ಮ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿಗೆ ತರುವುದರ ಜೊತೆಗೆ ಮೂಲಕ ಪ್ರಣಾಳಿಕೆಯಲ್ಲಿ ಘೋಷಿಸಿರುವ 75 ಭರವಸೆಗಳನ್ನು ಬಜೆಟ್‌ಮೂಲಕ ಈಡೇರಿಸುತ್ತೇವೆ ಎಂದು‌ಭರವಸೆ ನೀಡಿದ ಸಿಎಂ, ಪ್ರಧಾನಿ ಸೇರಿದಂತೆ ಬಿಜೆಪಿಯ ನಾಯಕರು ಈ ಬಗ್ಗೆ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದರು.

    ಈ ದೇಶವನ್ನು ದಿವಾಳಿ ಮಾಡಿದ್ದು ಮೋದಿ ಅವರ ಸರ್ಕಾರವೇ ಹೊರತು‌ ನಾವು ಯಾರೂ ಅಲ್ಲ ಎಂದು ಟೀಕಿಸಿದ ಸಿಎಂ, ಈ ರಾಜ್ಯದ ಸಂಪತ್ತನ್ನು ಲೂಟಿ ಹೊಡೆದು, ಭ್ರಷ್ಟಚಾರ ಹಾಗೂ ನಿರುದ್ಯೋಗವನ್ನು ಹೆಚ್ಚಿಸುವುದರ ಜೊತೆಗೆ ಬಡವರಿಗೆ ದಲಿತರಿಗೆ ಕೂಲಿ ಕಾರ್ಮಿಕರಿಗೆ ಅನ್ಯಾಯ ಮಾಡಿದ್ದು ರಾಜ್ಯದಲ್ಲಿ ಆಡಳಿತದಲ್ಲಿದ್ದ ಬಿಜೆಪಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

   ನಮ್ಮ ಸರ್ಕಾರ ಆಳಿತದಲ್ಲಿದ್ದಾಗ ಕಲ್ಯಾಣ ಕರ್ನಾಟಕದ 99,600 ಸೇರಿದಂತೆ ರಾಜ್ಯದಲ್ಲಿ 14.52 ಲಕ್ಷ ಮನೆ ಕಟ್ಟಿಸಿದ್ದೆವು ಆದರೆ ಬಿಜೆಪಿ ಸರ್ಕಾರ ಕಕ ಭಾಗದಲ್ಲಿ 19000 ಹಾಗೂ ರಾಜ್ಯದಲ್ಲಿ 7 ಲಕ್ಷ ಮನೆ ಕಟ್ಟಿಸಿದ್ದಾರೆ. ಕಕ ಭಾಗದ ಅಭಿವೃದ್ದಿಗೆ ನಮ್ಮ ಸರ್ಕಾರ ತನ್ನ ಬದ್ದತೆ ತೋರಿಸಿದೆ ಎಂದು ಹೇಳಿದ ಸಿಎಂ, ಬಿಜೆಪಿ ಸರ್ಕಾರ ಈ ಭಾಗದ ಹೆಸರನ್ನು ಮಾತ್ರ ಬದಲಾಯಿಸಿದೆ ಎಂದರು.

     ಶಕ್ತಿ ಯೋಜನೆಯಡಿಯಲ್ಲಿ ಪ್ರತಿನಿತ್ಯ 55 ಲಕ್ಷ ಮಹಿಳೆಯರು ಪ್ರತಿನಿತ್ಯ ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಮಹಿಳೆಯರು ದೇವಸ್ಥಾನ ಸೇರಿದಂತೆ ಅವಶ್ಯಕತೆ ಇರುವ ಕಡೆಗೆ ಹೋಗುತ್ತಿದ್ದಾರೆ. ಇದು‌ ಬಿಜೆಪಿ ನಾಯಕರ ಹೊಟ್ಟೆ ಉರಿಗೆ ಕಾರಣವಾಗಿದೆ ಎಂದರು. ಯೂರೋಪ್ ದೇಶದಲ್ಲಿ ಗ್ಯಾರಂಟಿಗಳನ್ನು ನೋಡಿ‌ ನಾವು ಗ್ಯಾರಂಟಿಗಳನ್ನು ಜಾರಿಗೆ ತರಲಿದ್ದೇವೆ. ಇದೇಬತರ ರಾಜ್ಯದ ಬೇರೆ ಬೇರೆ ರಾಜ್ಯಗಳು ಕೂಡಾ ಗ್ಯಾರಂಟಿ ಯೋಜನೆ ಜಾರಿಗೆ ತರಲಿವೆ. ಇದು ಕರ್ನಾಟಕ‌ ಮಾಡೆಲ್. ನಿಮ್ಮ ಗುಜರಾತ್ ಮಾಡೆಲ್ ಜಾರಿಗೆ ಬರಲು‌ ನಾವು ಬಿಡಲ್ಲ ಎಂದು ಕುಟುಕಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap