ಬರ ಪರಿಸ್ಥಿತಿ ವರದಿ ನೀಡಲು ಡೆಡ್‌ ಲೈನ್‌ ಕೊಟ್ಟ ಸಿಎಂ

ಬೆಂಗಳೂರು:

        ರಾಜ್ಯದ ಬರಪೀಡಿತ ತಾಲ್ಲೂಕುಗಳು ಮತ್ತು ಜಿಲ್ಲೆಗಳಿಗೆ ಭೇಟಿ ನೀಡಿ ನವೆಂಬರ್ 15 ರಂದು ವಿವರವಾದ ಸ್ಥಿತಿ ವರದಿ ಸಲ್ಲಿಸುವಂತೆ  ಮುಖ್ಯಮಂತ್ರಿ ಸಿದ್ದರಾಮಯ್ಯ  ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚಿಸಿದ್ದಾರೆ. ರಾಜ್ಯದಲ್ಲಿ 236 ತಾಲೂಕುಗಳ ಪೈಕಿ 216 ತಾಲೂಕುಗಳು ಅಸಮರ್ಪಕ ಮಳೆಯಿಂದಾಗಿ ಬರಪೀಡಿತ ಎಂದು ಘೋಷಿಸಲ್ಪಟ್ಟಿದ್ದು,  ಭೀಕರ ಬರಗಾಲವನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ದೇಶನ ಬಂದಿದೆ.

      ಮುಖ್ಯಮಂತ್ರಿಗಳ ಕಚೇರಿ ಶುಕ್ರವಾರ ಸಚಿವರಿಗೆ ಕಾರ್ಯಕ್ರಮಗಳನ್ನು ಬಿಡುಗಡೆ ಮಾಡಿದ್ದು,  ರಾಜ್ಯದಲ್ಲಿನ ಜನ, ಜಾನುವಾರು, ಕೃಷಿ ಮತ್ತು ಕೈಗಾರಿಕೆಗಳಿಗೆ ಕುಡಿಯುವ ನೀರಿನ ಅವಶ್ಯಕತೆಗಳು, ಮೇವು, ಉದ್ಯೋಗ ಸನ್ನಿವೇಶ, ಬರ ಪರಿಹಾರ ವಿತರಣೆ ಮತ್ತು ಬರ ಎದುರಿಸಲು ವಿವಿಧ ಕ್ರಮಗಳ ಕುರಿತು ಸಚಿವ ಸಂಪುಟ ಸಭೆ ಹಾಗೂ ಜಿಲ್ಲಾಧಿಕಾರಿ, ಸಿಇಒಗಳೊಂದಿಗೆ ಚರ್ಚಿಸಲಾಗಿದೆ ಎಂದು ಹೇಳಲಾಗಿದೆ. 

 
     ಬರ ಪರಿಹಾರ ಕ್ರಮಗಳಲ್ಲಿ ಯಾವುದೇ ಲೋಪ ಆಗದಂತೆ ನೋಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು.ಸರ್ಕಾರ ಕೈಗೊಂಡಿರುವ ಬರ ಪರಿಸ್ಥಿತಿ ಮತ್ತು ಪರಿಹಾರ ಕ್ರಮಗಳ ವಿವರವನ್ನು ಆಯಾ ತಾಲ್ಲೂಕುಗಳ ವರದಿಗಾರರಿಗೆ ವಿವರಿಸಲು ಮತ್ತು ನವೆಂಬರ್ 15 ರಂದು ತಮ್ಮ ತಮ್ಮ ಜಿಲ್ಲೆಗಳಲ್ಲಿ ಬರಗಾಲದ ಬಗ್ಗೆ ವಿವರವಾದ ವರದಿಯನ್ನು ನೀಡುವಂತೆ ಸಿದ್ದರಾಮಯ್ಯ ಸಚಿವರಿಗೆ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap