ಆ್ಯಸಿಡ್ ದಾಳಿ ಸಂತ್ರಸ್ಥೆ ಉದ್ಯೋಗ ನೀಡಿದ ಸಿಎಂ…!

ಬೆಂಗಳೂರು: 

     ಆ್ಯಸಿಡ್  ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸ್ನಾತಕೋತ್ತರ ಪದವೀಧರೆಯಾಗಿರುವ ಸಂತ್ರಸ್ತೆಗೆ  ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿ, ಸಂತ್ರಸ್ತೆ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗದ ಭರವಸೆ ನೀಡಿದರು. 

    2022ರ ಏಪ್ರಿಲ್ 28 ರಂದು ಆ್ಯಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ಥೆ ಎಂ.ಕಾಂ ಪದವೀಧರೆ ಆಗಿದ್ದಾರೆ. ತಂದೆ ಮತ್ತು ತಾಯಿಯ ಜತೆ ಜನತಾ ದರ್ಶನಕ್ಕೆ ಬಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು.  ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರಲ್ಲೂ ಉದ್ಯೋಗದ ಮನವಿ ಮಾಡಿದ್ದೆವು. ಅವರು ಭರವಸೆ ನೀಡಿದ್ದರು. ಆದರೆ ಉದ್ಯೋಗ ಮಾತ್ರ ಕೊಡಲಿಲ್ಲ ಎಂದು ಅಳಲು ತೋಡಿಕೊಂಡರು. 
 
    ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿಗಳು ತಮ್ಮ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

     ಆ್ಯಸಿಡ್ ದಾಳಿ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಗೆ ಇಳಿದ ಪೊಲೀಸರು, ಆರೋಪಿ ಸ್ವಾಮಿ ವೇಷದಲ್ಲಿ ತಿರುವಣ್ಣಾಮಲೈ ಆಶ್ರಮದಲ್ಲಿ ತಲೆ ಮರೆಸಿಕೊಂಡಿರುವುದನ್ನು ಪತ್ತೆ ಹಚ್ಚಿದರು. ಬಳಿಕ ಭಕ್ತರ ವೇಷದಲ್ಲಿ ಹೋಗಿ ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಆರೋಪಿ ಬೆಂಗಳೂರು ಜೈಲಿನಲ್ಲಿದ್ದಾನೆ. ಸಂತ್ರಸ್ತೆ ಚಿಕಿತ್ಸೆ ಪಡೆಯುತ್ತಾ ಚೇತರಿಸಿಕೊಳ್ಳುತ್ತಿದ್ದಾರೆ. ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೆರವು ನೀಡಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap