ನಾಳೆ ದೆಹಲಿಗೆ ಸಿಎಂ ಪ್ರಯಾಣ

ಬೆಂಗಳೂರು:

    ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಗೃಹ ಸಚಿವ ಅಮಿತ್ ಶಾ ಮತ್ತು ಇತರ ರಾಷ್ಟ್ರ ನಾಯಕರನ್ನು ಭೇಟಿ ಮಾಡಿ ಸೌಹಾರ್ದಯುತವಾಗಿ ಮಾತುಕತೆ ನಡೆಸಲಿದ್ದಾರೆ. 

    ಸಿದ್ದರಾಮಯ್ಯನವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡುವ ಕಾರ್ಯಕ್ರಮವೂ ಇತ್ತು. ಆದರೆ ಪ್ರಧಾನಿಯವರು ನಾಳೆ ಜೂನ್ 21ರಿಂದ 24ರವರೆಗೆ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ.

    ಭೇಟಿ ವೇಳೆ ಸಿದ್ದರಾಮಯ್ಯ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಕರ್ನಾಟಕದ ಕಾಮಗಾರಿ ಯೋಜನೆಗಳಿಗೆ ಸಹಕಾರ ಕೋರುವ ಸಾಧ್ಯತೆಯಿದೆ. ನಂತರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap