ಪರಿಷತ್ ವಿಪಕ್ಷ ನಾಯಕ ಸ್ಥಾನದ ನಿರೀಕ್ಷೆಯಲ್ಲಿದ್ದಂತ ಕಾಂಗ್ರೆಸ್ ಎಂ ಎಲ್ ಸಿ ಸಿ.ಎಂ ಇಬ್ರಾಹಿಂಗೆ ( MLC CM Ibrahim ) ಆ ಸ್ಥಾನ ದೊರೆತಿರಲಿಲ್ಲ. ಹೀಗಾಗಿ ಬೇಸರಗೊಂಡಿರುವಂತ ಅವರು, ಕಾಂಗ್ರೆಸ್ ಪಕ್ಷ ತೊರೆಯೋದಾಗಿಯೂ ಘೋಷಣೆ ಮಾಡಿದ್ದರು.ಈ ಬಳಿಕ, ಇಂದು ಎಂ.ಎಲ್ ಸಿ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ಅವರು ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ನಿನ್ನೆ ಅಧಿಕೃತವಾಗಿ ಪ್ರಕಟಿಸಿದ್ದಂತ ಅವರು, ಇಂದು ಬೆಳಿಗ್ಗೆ 11ಗಂಟೆಗೆ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡೋದಾಗಿ ಘೋಷಿಸಿದ್ದರು. ಅದರಂತೆ ಇಂದು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾದಂತ ಸಿಎಂ ಇಬ್ರಾಹಿಂ ಅವರು, ತಮ್ಮ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಅಧಿಕೃತವಾಗಿ ಪರಿಷತ್ ಸದಸ್ಯ ಸ್ಥಾನಕ್ಕೆ ಗುಡ್ ಬೈ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ