ಯತ್ನಾಳ್‌ ಹಾದಿ ಹಿಡಿದ್ರಾ ಸಿ ಎಂ ಇಬ್ರಾಹಿಂ….!

ಮೈಸೂರು

   ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ಬಣ ರಾಜಕೀಯದಿಂದ ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ಜೋರಾಗಿದೆ. ಬಿವೈ ವಿಜಯೇಂದ್ರ-ಯಡಿಯೂರಪ್ಪ ಮತ್ತು ಅವರ ವಿರೋಧಿ ಬಣ ಎಂದು ಎರಡು ತಂಡಗಳಾಗಿದ್ದು, ವಿಜಯೇಂದ್ರ ವಿರೋಧಿ ಬಣದ ನಾಯಕ ಯತ್ನಾಳ್​. ಅದರಂತೆ ಇದೀಗ ಜೆಡಿಎಸ್​ನಲ್ಲೂ ಅಸಮಾಧಾನಿತ ನಾಯಕರ ತಂಡ ರಚನೆಗೆ ಸಿ.ಎಂ ಇಬ್ರಾಹಿಂದ ಮುಂದಾಗಿದ್ದಾರೆ. ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ನಡೆಯಿಂದ ಬೇಸರಗೊಂಡಿರುವ ಶಾಸಕರು, ನಾಯಕರನ್ನು ಒಗ್ಗೂಡಿಸಿ ತಂಡ ರಚನೆ ಮಾಡಲು ಇಬ್ರಾಹಿಂ ಸಜ್ಜಾಗಿದ್ದಾರೆ.

   ಈಗ ಇರುವ ಜೆಡಿಎಸ್ ಮನೆಗೆ ಬೆಂಕಿ ಬಿದ್ದಾಗಿದೆ. ಜೆಡಿಎಸ್ ಶಾಸಕರು ಅವರವರ ಕ್ಷೇತ್ರ ಕಾಪಾಡಿಕೊಳ್ಳಬೇಕಿದೆ. ಹೀಗಾಗಿ ಒಬ್ಬೊಬ್ಬರೇ ತಮ್ಮ ಹೇಳಿಕೆ ನೀಡಲು ಆರಂಭಿಸಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಈಗಲಾದರೂ ಬುದ್ಧಿ ಕಲಿಯಬೇಕು. ಜೆಡಿಎಸ್ ಪಕ್ಷ ಫ್ಯಾಮಿಲಿ ಕಂಪನಿ ಮಾಡುವುದನ್ನು ಬಿಡಬೇಕು. ಆಗ ಮಾತ್ರ ಜೆಡಿಎಸ್ ಉಳಿಯಲು ಸಾಧ್ಯ ಎಂದು ಸಲಹೆ ನೀಡಿದರು.
   ಜೆಡಿಎಸ್ ಪರಿಸ್ಥಿತಿ ಬಸ್ ಸ್ಟ್ಯಾಂಡ್ ನಲ್ಲಿ ನಿಂತ ಬಸವಿ ತರ ಆಗಿದೆ. ಬಿಜೆಪಿಯನ್ನ ಲವ್ ಮಾಡಿದ್ದು ಆಯಿತು. ಈಗ ಅವರನ್ನ ಅಲ್ಲೇ ಬಿಟ್ಟುಬಿಡಬೇಕು. ನಾನು ಕುಮಾರಸ್ವಾಮಿ ಜೊತೆಯಲ್ಲಿದ್ದಾಗ ಚನ್ನಪಟ್ಟಣದಲ್ಲಿ ನಾಲ್ಕು ಕೋಟಿ‌ ಖರ್ಚು ಮಾಡಿ ‌20 ಸಾವಿರದಿಂದ ಗೆದ್ದರು. ಈಗ ನಾನು ಅವರ ಜೊತೆಯಲ್ಲಿಲ್ಲ, 150 ಕೋಟಿ ಖರ್ಚು ಮಾಡಿ 25 ಸಾವಿರದಿಂದ ಸೋತಿದ್ದಾರೆ. ಅಲ್ಲಿಗೆ ಮುಸ್ಲಿಮರು ಇರದಿದ್ದರೇ ಜೆಡಿಎಸ್ ಗೆ ಒಂದು ಸ್ಥಾನವೂ ಬರುವುದಿಲ್ಲ. ಅವತ್ತು 19 ಜನ ಗೆದಿದ್ದು ಮುಸ್ಲಿಮರಿಂದ ಎಂಬುದು ಈಗ ಸಾಬೀತಾಗಿದೆ. ಈಗ ನಾವೇನು ಕಾಂಗ್ರೆಸ್ ಜೊತೆ ಹೋಗಲು ನಿರ್ಧಾರ ಮಾಡಿಲ್ಲ. ತೃತೀಯ ರಂಗ ಸ್ಥಾಪನೆಯ ಬಗ್ಗೆ ಮನಸ್ಸು ಮಾಡುತ್ತಿದ್ದೇವೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.

Recent Articles

spot_img

Related Stories

Share via
Copy link
Powered by Social Snap