ತುಮಕೂರಿನಲ್ಲಿ ಐಫೋನ್‌ ಘಟಕ ಸ್ಥಾಪನೆಗೆ ಸಿಎಂ ಪ್ರಸ್ತಾವನೆ…!

ಬೆಂಗಳೂರು:

      ದೇವನಹಳ್ಳಿಯ ಐಟಿಐಆರ್ ವಲಯದಲ್ಲಿ  ಫಾಕ್ಸ್ ಕಾನ್ ಕಂಪನಿಯು ಸ್ಥಾಪಿಸಲು ಉದ್ದೇಶಿಸಿರುವ ಐಫೋನ್ ತಯಾರಿಕಾ ಘಟಕಕ್ಕೆ ಪೂರಕವಾಗಿ ತುಮಕೂರಿನಲ್ಲಿ ಮತ್ತೊಂದು ಘಟಕ ಸ್ಥಾಪಿಸುವ ಪ್ರಸ್ತಾವನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಂಪನಿಯ ಸಿಇಓ ಬ್ರ್ಯಾಂಡ್ ಚೆಂಗ್ ನೇತೃತ್ವದ ಎಫ್ಐಐ ನಿಯೋಗದ ಜೊತೆ  ಉನ್ನತ ಮಟ್ಟದ ಸಭೆ ವಿಧಾನಸೌಧ ಸಮಿತಿ ಕೊಠಡಿಯಲ್ಲಿ ನಡೆಯಿತು.

     ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಕೈಗಾರಿಕಾ ಬೆಳವಣಿಗೆಗೆ ಅನುಕೂಲವಾಗುವಂತಹ ಉತ್ತಮ ಪರಿಸರ ಇದೆ. ಶೈಕ್ಷಣಿಕ ಹಾಗೂ ಉದ್ಯಮ ವಲಯದ ನಡುವೆ ನಿರಂತರ ಸಂಪರ್ಕ ಮತ್ತು ಸಮನ್ವಯತೆ ಇದೆ. ಜೊತೆಗೆ ಕೌಶಲ್ಯಯುಕ್ತ ಸಿಬ್ಬಂದಿಯೂ ಲಭ್ಯವಿದ್ದಾರೆ ಎಂದು ವಿವರಿಸಿದರು. ಫಾಕ್ಸ್ ಕಾನ್ ಸಂಸ್ಥೆಯು ತನ್ನ ಉದ್ಯಮ ಸ್ಥಾಪಿಸಲು ರಾಜ್ಯ ಸರ್ಕಾರವು ಎಲ್ಲ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
      ಫಾಕ್ಸ್ ಕಾನ್ ಕಂಪನಿಯ  ಅಂಗಸಂಸ್ಥೆ ಫಾಕ್ಸ್ ಕಾನ್ ಇಂಡಸ್ಟ್ರಿಯಲ್ ಇಂಟರ್ನೆಟ್ (ಎಫ್ಐಟಿ) ಇದಕ್ಕಾಗಿ 8,800 ಕೋಟಿ ರೂ. ಹೂಡಿಕೆ ಮಾಡುವ ಯೋಜನೆ ಹೊಂದಿದೆ. ಇದು 14,000 ಉದ್ಯೋಗ  ಸೃಷ್ಟಿಸಲಿದ್ದು ಘಟಕ ಸ್ಥಾಪನೆಗೆ 100 ಎಕರೆ ಜಾಗ ಬೇಕಾಗುತ್ತದೆ. ತುಮಕೂರಿನ ಜಪಾನ್ ಇಂಡಸ್ಟ್ರಿಯಲ್ ಟೌನ್ ಷಿಪ್ ನಲ್ಲಿ ನಿಯೋಗದ ಸದಸ್ಯರು ಇಂದೇ ಲಭ್ಯ ಭೂಮಿಯನ್ನು ವೀಕ್ಷಿಸಲಿದ್ದಾರೆ. 

     ಫೋನ್ ಪರದೆ, ಹೊರ ಕವಚ ಹಾಗೂ ಇತರ ಯಾಂತ್ರೀಕೃತ ಬಿಡಿಭಾಗಗಳನ್ನು ಎಫ್ಐಐ ಘಟಕ ತಯಾರಿಸಲಿದೆ. ದೇವನಹಳ್ಳಿ ಬಳಿಯ ಉದ್ದೇಶಿತ ಐಫೋನ್ ತಯಾರಿಕಾ ಘಟಕವು ‘ಎಂಡ್ ಅಸೆಂಬ್ಲಿ’ ಘಟಕವಾಗಿದ್ದರೆ, ಎಫ್ ಐಐ ಘಟಕವು ಅದಕ್ಕೆ ಪೂರಕ ಘಟಕವಾಗಿರಲಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap