ಬೆಂಗಳೂರು:
ಪ್ರತಿ ಟನ್ ಕಬ್ಬಿಗೆ 3,500 ರೂ. ದರ ನಿಗದಿ ಮಾಡಬೇಕು ಎಂದು ಒತ್ತಾಯಿಸಿ ಬೆಳಗಾವಿಯಲ್ಲಿ ರೈತರು ಪ್ರತಿಭಟನೆ (Belagavi Farmers Protest) ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ (ನ.7) ಬೆಳಗ್ಗೆ 11 ಗಂಟೆಗೆ ಸಭೆ ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ಸಭೆ ನಡೆಸಿ, ರೈತರ ಪ್ರತಿಭಟನೆ, ಎಫ್‌ಆರ್‌ಪಿ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ನಂತರ ಮಧ್ಯಾಹ್ನ 1 ಗಂಟೆಗೆ ರೈತ ಮುಖಂಡರ ಜತೆ ಸಭೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಕಬ್ಬಿಗೆ ಬೆಲೆ ನಿಗದಿ (ಎಫ್‌ಆರ್‌ಪಿ) ಮಾಡುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ನಾಳೆ ಪಿಎಂ ಮೋದಿ ಅವರಿಗೆ ಪತ್ರ ಬರೆಯುತ್ತೇನೆ. ಅವರು ಭೇಟಿಗೆ ಸಮಯ ನೀಡಿದರೆ, ರೈತರ ಬೇಡಿಕೆಗಳ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.








