ತುಮಕೂರು:

ಎಸಿಬಿ ದಾಳಿಯಾದ ನಂತರ ಆರೋಪಿಗಳಿಗೆ ಶಿಕ್ಷೆಯಾಗುತ್ತಿಲ್ಲ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಇದೆ. ಇದಕ್ಕೆ ಸಂಬಂಧಿಸಿದಂತೆ ಕೆಲವು ವಿಧಿ ವಿಧಾನಗಳನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದ ಸ್ನೇಹ ಸಂಗಮ ಸೌಹಾರ್ದ ಸಹಕಾರಿ ಸಭಾಂಗಣದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಆಯೋಜಿಸಿದ್ದ ಕೋರ್ ಕಮಿಟಿ ಸಭೆಯ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಆರೋಪಿಗಳನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ, ಆದರೆ ಎಸಿಬಿ ಮತ್ತು ಪ್ರಾಸಿಕ್ಯೂಷನ್ ನಡುವೆ ಸಂಬಂಧ ಗಟ್ಟಿಯಾಗುವಂತೆ ಮಾಡಿ ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸಲು ಮುಂದಾಗಬೇಕು.
ದಾಳಿ ನಡೆದ ನಂತರ ಕಾನೂನಿನ ಅದರದ್ದೇ ಆದ ಪ್ರಕ್ರಿಯೆಗಳು ನಡೆಯುತ್ತವೆ. ಎಸಿಬಿ ಹಲ್ಲು ಕಿತ್ತ ಹಾವಲ್ಲ, ರಾಜ್ಯದಲ್ಲಿ ಈ ಸಂಶ್ಥೆ ಬಲಿಷ್ಠವಾಗಿದೆ. ಮುಂದಿನ ದಿನಗಳಲ್ಲಿ ಎಸಿಬಿಗೆ ಉತ್ತಮ ಅಧಿಕಾರಿಗಳನ್ನು ಹಾಕುವ ಮೂಲಕ ಮತ್ತಷ್ಟು ಬಲಪಡಿಸಲಾಗುವುದು ಎಂದರು.
ಎಸಿಬಿ ದಾಳಿ ನಂತರ ಚಾರ್ಜಶೀಟ್ ಸಲ್ಲಿಕೆಯಲ್ಲಿ ವಿಳಂಬವಾಗುತ್ತಿರುವುದು ಸಹ ಪ್ರಕರಣದ ಶೀಘ್ರ ವಿಲೇವಾರಿಗೆ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಗಮನ ಹರಿಸಲಾಗುವುದು. ಪ್ರಾಸಿಕ್ಯೂಷನ್ ಪರಿಣಾಮಕಾರಿಯಾಗಿ ಕೆಲಸ ಮಾಡುವಂತೆ ಹಾಗೂ ಅಲ್ಪಾವಧಿಯಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಕೆಯಾಗಲು ಅವಕಾಶವಾಗುವಂಯಹ ಪ್ರಯತ್ನಗಳ ಕಡೆಗೆ ಗಮನ ಹರಿಸಲಾಗುವುದು. ಎಲ್ಲೆಲ್ಲಿ ಲೂಪ್ ಹೋಲ್ಸ ಇದೆಯೋ ಅದನ್ನು ಸರಿಪಡಿಸುವ ಪ್ರಯತ್ನ ಮಾಡಲಾಗುವುದು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








