KKRDB ಅನುದಾನ ಅಕ್ರಮ : ತನಿಖೆಗೆ ಸಿಎಂ ಆದೇಶ

ಬೆಂಗಳೂರು: 

     ಕಳೆದ ಬಿಜೆಪಿ ಸರ್ಕಾರದ ಆಡಳತ ಅವಧಿಯಲ್ಲಿ ಕೆ ಕೆ ಆರ್‌ ಡಿಬಿ ಅನುದಾನದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಗಳವಾರ ಆದೇಶ ಹೊರಡಿಸಿದ್ದಾರೆ. 

    ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ ಕಳೆದ ಎರಡ್ಮೂರು ವರ್ಷಗಳಿಂದ ಸುಮಾರು 5 ಸಾವಿರ ಕೋಟಿ ರೂಪಾಯಿ ಅನುದಾನದಲ್ಲಿ ವ್ಯಾಪಕ ಅಕ್ರಮಗಳು ನಡೆದಿರುವ ಆರೋಪಗಳು ಕೇಳಿಬಂದಿದ್ದು, ಈ ಬಗ್ಗೆ ಇಲಾಖಾ ತನಿಖೆ ನಡೆಸಲು ಆದೇಶಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು. ಅದರಂತೆ ಇದೀಗ ಸಿದ್ದರಾಮಯ್ಯ ಅವರು ಈ ಕೂಡಲೇ ಈ ವಿಷಯದ ಕುರಿತು ನಿರ್ದಾಕ್ಷಿಣ್ಯವಾಗಿ ಇಲಾಖಾ ತನಿಖೆ ನಡೆಸಲು ಆದೇಶ ಹೊರಡಿಸಿದ್ದಾರೆ.

     ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ ಎಲ್ಲೆಲ್ಲಿ ನಿಯಮಬಾಹಿರವಾಗಿ ಅನುದಾನಗಳನ್ನು ವಿನಿಯೋಗಿಸಲಾಗಿದೆ, ಯಾವ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ ಎಂಬುದರ ಕುರಿತು ಗಂಭೀರವಾಗಿ ಪರಿಗಣಿಸಿ 15 ದಿನಗಳ ಒಳಗೆ ವಿವರಗಳೊಂದಿಗೆ ವರದಿಯನ್ನು ಸಲ್ಲಿಸುವಂತೆ ಸಿಎಂ ಆದೇಶ ಹೊರಡಿಸಿದ್ದಾರೆ. 

     ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಸಂಘದಿಂದ ಅನುದಾನ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿದ್ದರಾಮಯ್ಯನವರಿಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದರು. ಸಿಎಂ ವಿವೇಚನ ಕೋಟಾದಲ್ಲಿ ಅಭಿವೃದ್ಧಿ ಮಂಡಳಿ ಸಿದ್ಧಪಡಿಸಿದ ಕ್ರಿಯಾ ಯೋಜನೆಯಲ್ಲಿ ಅಕ್ರಮ ಆಗಿದೆ. ಅಭಿವೃದ್ಧಿ ಮಂಡಳಿಯ ಕಳಪೆ ಕಾಮಗಾರಿ ಬಗ್ಗೆ ಸಿಎಜಿ ವರದಿ ನೀಡಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ತನಿಖೆ ಮಾಡುವ ಅಗತ್ಯವಿದೆ ಎಂದು ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಪತ್ರ ಬರೆದಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap