ಭೋಪಾಲ್:
ಬುಡಕಟ್ಟು ವ್ಯಕ್ತಿಯೊಬ್ಬರ ಮೇಲೆ ದುರುಳನೊಬ್ಬ ಮೂತ್ರ ವಿಸರ್ಜನೆ ಮಾಡಿರುವ ಘಟನೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಇದೀಗ ಮೂತ್ರ ವಿಸರ್ಜನೆ ಮಾಡಲಾಗಿದ್ದ ವ್ಯಕ್ತಿಯ ಪಾದವನ್ನು ಸಿಎಂ ಶಿವರಾಜ್ ಸಿಂಗ್ ಚೌಹ್ಹಾಣ್ ತೊಳೆದಿದ್ದಾರೆ. ಬುಡಕಟ್ಟು ವ್ಯಕ್ತಿ ದಶಮತ್ ರಾವತ್ ಅವರನ್ನು ಸಿಎಂ ತಮ್ಮ ನಿವಾಸಕ್ಕೆ ಕರೆದೊಯ್ದು ಅವರ ಪಾದವನ್ನು ನೀರಿನಿಂದ ತೊಳೆದಿದ್ದಾರೆ.
ಸಿದ್ಧಿ ಜಿಲ್ಲೆಯಲ್ಲಿ ನಿನ್ನೆ ವೈರಲ್ ಆದ ವೀಡಿಯೊದಲ್ಲಿ, ಆರೋಪಿ ಪ್ರವೇಶ್ ಶುಕ್ಲಾ, ರಾವತ್ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವುದು ಕಂಡುಬಂದಿದೆ. ಈ ವಿಡಿಯೋ ನೋಡಿ ತುಂಬಾ ನೋವಾಗಿತ್ತು. ಅದಕ್ಕಾಗಿ ನಿನ್ನ ಕ್ಷಮೆ ಕೇಳುತ್ತೇನೆ. ಜನರು ನನಗೆ ದೇವರಿದ್ದಂತೆ ಎಂದು ಶಿವರಾಜ್ ಸಿಂಗ್ ಚೌಹ್ಹಾಣ್ ಹೇಳಿದ್ದಾರೆ. ಘಟನೆ ಕುರಿತು ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಮೂತ್ರ ವಿಸರ್ಜನೆ ಮಾಡಿದ ಆರೋಪಿಯನ್ನು ನಿನ್ನೆ ಬಂಧಿಸಲಾಗಿದೆ.