ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್ ನಿಧನ: ಸಿಎಂ ಸಂತಾಪ

ಬೆಂಗಳೂರು:

    ಹಲವು ದಿನಗಳಿಂದ ತೀವ್ರ ಆರೋಗ್ಯದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಎಸ್​.ಕೆ. ಶ್ಯಾಮಸುಂದರ್​ ಅವರು ಸೋಮವಾರ ನಿಧನರಾಗಿದ್ದಾರೆ.ಶ್ಯಾಮಸುಂದರ್​ ಅವರು ಬೆಂಗಳೂರಿನ ದಿಗ್ವಿಶ್ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಆರೋಗ್ಯ ಚೇತರಿಸದೇ ಕೋಮಾಗೆ ಜಾರಿದ್ದರು. ನಿರಂತರವಾಗಿ ಚಿಕಿತ್ಸೆ ನೀಡಿದರೂ ಯಾವುದೇ ಪ್ರಯೋಜನವಾಗಲಿಲ್ಲ.ಸೋಮರಾತ್ರಿ ರಾತ್ರಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಶ್ಯಾಮಸುಂದರ್​ ಅವರಿಗೆ 72 ವರ್ಷ ವಯಸ್ಸಾಗಿತ್ತು.

    ಶ್ಯಾಮಸುಂದರ್ ಅವರು ಕನ್ನಡ ಪತ್ರಿಕೋದ್ಯಮಲ್ಲಿ ಸುಮಾರು 39 ವರ್ಷ ಅನುಭವವನ್ನು ಹೊಂದಿದ್ದರು. ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಉನ್ನತ ಜವಾಬ್ದಾರಿಯನ್ನು ನಿರ್ವಹಿಸಿರುವ ಶ್ಯಾಮಸುಂದರ್​ ಅವರು,ಕನ್ನಡ ಡಿಜಿಟಲ್​ ಮಾಧ್ಯಮಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಪತ್ರಕರ್ತರ ಬಳಗದಲ್ಲಿ ಶಾಮಿ ಎಂದೇ ಪ್ರಸಿದ್ಧಿ ಪಡೆದಿದ್ದರು. ಅಲ್ಲದೆ, ಅವಿವಾಹಿತರಾಗಿದ್ದ ಶ್ಯಾಮಸುಂದರ್‌, ಜಗ್ಗೇಶ್​ ನಟನೆಯ ಎದ್ದೇಳು ಮಂಜುನಾಥ ಸಿನಿಮಾದಲ್ಲಿ ಬ್ಯಾಂಕ್ ಮ್ಯಾನೇಜರ್ ಪಾತ್ರವನ್ನೂ ನಿರ್ವಹಿಸಿದ್ದರು. ಶ್ಯಾಮಸುಂದರ್​ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.

    ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿಗಳು, ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಬರಹವನ್ನೇ ಬದುಕಾಗಿಸಿಕೊಂಡಿದ್ದ ಶ್ಯಾಮಸುಂದರ್ ಅವರು ಸುದೀರ್ಘಕಾಲ ಪತ್ರಕರ್ತರಾಗಿ ದುಡಿದವರು.ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.

Recent Articles

spot_img

Related Stories

Share via
Copy link