ಖರ್ಗೆ ಕುಟುಂಬಕ್ಕೆ ಭೂಮಿ :ಕಾನೂನು ಬದ್ದವವಾಗಿಯೇ ಇದೆ : ಸಿಎಂ

ಬೆಂಗಳೂರು:

    ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ನಡೆಸುತ್ತಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಕೆಐಎಡಿಬಿಯಿಂದ ಐದು ಎಕರೆ ಜಮೀನು ಮಂಜೂರು ಮಾಡಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸಮರ್ಥಿಸಿಕೊಂಡಿದ್ದು, ಕಾನೂನುಬದ್ಧವಾಗಿ ಭೂಮಿ ಮಂಜೂರು ಮಾಡಲಾಗಿದೆ ಎಂದು ಹೇಳಿದರು.

   ಸುದ್ದಿಗಾರರೊಂದಿಗೆ ಮಾತನಾಡಿದ, ಖರ್ಗೆ ಕುಟುಂಬದ ಟ್ರಸ್ಟ್ ಗೆ ಕಾನೂನಾತ್ಮಕವಾಗಿಯೇ ನಿವೇಶನ ನೀಡಲಾಗಿದೆ. ಕಾನೂನು ಪ್ರಕಾರ ನಿವೇಶನ ನೀಡಿರುವುದರಿಂದ ವಿವಾದ ಸೃಷ್ಟಿಸುವ ಅಗತ್ಯವಿಲ್ಲ. ಬಿಜೆಪಿಯವರ ಕಾಲದಲ್ಲಿ ಚಾಣಕ್ಯ ವಿವಿಗೆ ಹಾಗೂ ಆರ್’ಎಸ್ಎಸ್’ನ ವಿವಿಧ ಟ್ರಸ್ಟ್’ಗಳಿಗೆ ಎಕರೆಗಟ್ಟಲೆ ಭೂಮಿಯನ್ನು ಮಂಜೂರು ಮಾಡಿದ್ದಾರೆ. ಈ ಬಗ್ಗೆ ಬಿಜೆಪಿ ಏನು ಹೇಳುತ್ತದೆ ಎಂದು ಪ್ರಶ್ನಿಸಿದರು.

    ಮುರುಗೇಶ್ ನಿರಾಣಿ ಅವರು ಸಚಿವರಾಗಿದ್ದಾಗ ಅವರಿಗೆ ಅವರೇ ಜಮೀನು ಮಂಜೂರು ಮಾಡಿಕೊಂಡಿದ್ದರು. ಸಕ್ಕರೆ ಕಾರ್ಖಾನೆಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ಅನೇಕ ನಾಯಕರ ವಿಷಯವೂ ಇದೇ ಆಗಿರುತ್ತದೆ. ಆದರೆ, ಎಲ್ಲವೂ ದಾಖಲೆಗಳ ಮೂಲಕ ಹೋಗಬೇಕಾಗುತ್ತದೆ ಎಂದು ಸಲಹೆ ನೀಡಿದರು. ಇದೇ ವೇಲೆ ಖರ್ಗೆ ಕುಟುಂಬವನ್ನು ಗುರಿಯಾಗಿಸುವುದು ಬಿಜೆಪಿಯ ಉದ್ದೇಶವಾಗಿದೆ ಎಂದು ಆರೋಪಿಸಿದರು. ನನ್ನ ಕುಟುಂಬ 50,000 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಹೊಂದಿದೆ ಎಂದು ಬಿಜೆಪಿಯವರು ಆರೋಪಿಸಿದ್ದರು. ಅಷ್ಟು ದೊಡ್ಡ ಆಸ್ತಿ ಇದ್ದರೆ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನಮ್ಮನ್ನು ಸುಮ್ಮನೆ ಬಿಡುತ್ತಿದ್ದರೇ ಎಂದು ಪ್ರಶ್ನಿಸಿದರು.

    ಕಾಂಗ್ರೆಸ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರನ್ನು ಬೆಳೆಸಿದ್ದರು. ಆದರೆ. ಈಗ ಅವರೇ ಎಐಸಿಸಿ ಅಧ್ಯಕ್ಷರ ವಿರುದ್ಧ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಅವರ ಅಫಿಡವಿಟ್ ಪ್ರಕಾರ, ಖರ್ಗೆ ಅವರು ಹೊಸಕೋಟೆ, ಮೈಸೂರು ಮತ್ತು ಬಿಡದಿಯಲ್ಲಿ ಕೆಐಎಡಿಬಿ ಭೂಮಿಯನ್ನು ಹೊಂಂದಿದ್ದಾರೆ ಎಂದು ಹೇಳಿದರು.

    ಆಗಸ್ಟ್‌ 29ರಂದು 16ನೇ ಕೇಂದ್ರ ಹಣಕಾಸಿನ ಆಯೋಗದವರೊಂದಿಗೆ ಸಭೆ ನಡೆಯಲಿದ್ದು, 15 ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವರೆಂಬ ವಿಶ್ವಾಸವಿದೆ ಆಯೋಗವು ನನ್ನನ್ನು ಮತ್ತು ಹಣಕಾಸು ಇಲಾಖೆಯ ಅಧಿಕಾರಿಗಳನ್ನು ಭೇಟಿಯಾಗಲಿದ್ದು, ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕವು ಹೆಚ್ಚು ನಷ್ಟ ಅನುಭವಿಸಿದೆ ಎಂಬುದನ್ನು ವಿವರಿಸಲಾಗುವುದು .ಕರ್ನಾಟಕ, ಹೆಚ್ಚು ನಿರ್ಲಕ್ಷ್ಯಕ್ಕೆ ಒಳಗಾದ ರಾಜ್ಯ ಎಂದು ಮನದಟ್ಟು ಮಾಡಿ, ತೆರಿಗೆ ಹಂಚಿಕೆಯನ್ನು ಶೇ. 41 ರಿಂದ ಶೇ.50ಕ್ಕೆ ಹೆಚ್ಚಿಸುವಂತೆ ಒತ್ತಾಯಿಸಲಾಗುವುದು. ಸೆಸ್ ಮತ್ತು ಸರ್ಚಾಜ್ ಗಳಲ್ಲಿ ರಾಜ್ಯಗಳಿಗೂ ಪಾಲು ನೀಡಬೇಕು. ಸೆಸ್ ಮತ್ತು ಸರ್ಚಾಜುಗಳು ಹೆಚ್ಚುತ್ತಿದ್ದು, ರಾಜ್ಯಕ್ಕೆ ತೆರಿಗೆ ಹಂಚಿಕೆ ಕಡಿಮೆಯಾಗುತ್ತಿರುವುದನ್ನು ಹಣಕಾಸು ಆಯೋಗದ ಅಧ್ಯಕ್ಷರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.

Recent Articles

spot_img

Related Stories

Share via
Copy link
Powered by Social Snap