ಸಂಪುಟ ಸಹೋದ್ಯೋಗಿಗಳೊಂದಿಗಿನ ಔತಣಕೂಟ: ಅದರಲ್ಲಿ ತಪ್ಪೇನಿದೆ?: ಸಿಎಂ ಸಿದ್ದರಾಮಯ್ಯ

ದಾವಣಗೆರೆ:

   ಇತ್ತೀಚೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ನಡೆಸಿದ ಔತಣಕೂಟದಲ್ಲಿ ಯಾವುದೇ ರಾಜಕೀಯ ವಿಷಯಗಳ ಬಗ್ಗೆ ಚರ್ಚಿಸಲಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಸ್ಪಷ್ಟಪಡಿಸಿದರು.

   ಸುದ್ದಿಗಾರರೊಂದಗೆ ಮಾತನಾಡಿದ ಅವರು, ಮಾಧ್ಯಮಗಳು ಇಲ್ಲಸಲ್ಲದ ಸುದ್ದಿಗಳನ್ನು ಸೃಷ್ಟಿಸುತ್ತಿವೆ. ಸಂಪುಟ ಸಹೋದ್ಯೋಗಿಗಳು ಒಟ್ಟಿಗೆ ಸೇರಿದೆ ಮಾಧ್ಯಮಗಳು ವಿವಾದ ಸೃಷ್ಟಿಸುತ್ತಿವ. ಕೆಲವರು ಇದಕ್ಕೆ ರಾಜಕೀಯ ಬಣ್ಣ ನೀಡುತ್ತಿದ್ದಾರೆ. ಔತಣಕೂಟ ನಡೆಸುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

   ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಹುದ್ದೆಯಲ್ಲಿನ ಬದಲಾವಣೆ ಸುದ್ದಿ ಕುರಿತು ಮಾತನಾಡಿ, ನಮ್ಮಿಂದ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾಯಿಸಲು ಸಾಧ್ಯವೇ? ಈ ಕುರಿತ ನಿರ್ಧಾರ ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟದ್ದು. ಎಂದು ತಿಳಿಸಿದರು.

   ಬಸ್ ದರ ಹೆಚ್ಚಳದ ಕುರಿತು ಮಾತನಾಡಿ, ಐದು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಬಸ್ ದರ ಏರಿಕೆ ಮಾಡಲಾಗಿದೆ. ಹಣದುಬ್ಬರ ಹೆಚ್ಚಾಗಿದೆ ಮತ್ತು ಸಾರಿಗೆ ನಿಗಮಗಳಲ್ಲಿ ಡೀಸೆಲ್ ಬೆಲೆಗಳು ಮತ್ತು ವೇತನವನ್ನಬೂ ಹೆಚ್ಚಳ ಮಾಡಲಾಗಿದೆ. ಆದ್ದರಿಂದ, ಪ್ರಯಾಣ ದರ ಹೆಚ್ಚಳ ಅನಿವಾರ್ಯವಾಗಿತ್ತು ಎಂದರು.ಬಸ್ ದರವನ್ನು ಹೆಚ್ಚಿಸುವ ಬೇಡಿಕೆಯೂ ಬಹಳ ದಿನಗಳಿಂದ ಇತ್ತು, ಆದ್ದರಿಂದ ಈ ನಿರ್ಧಾರ ತೆಗೆದುಕೊಂಡಿದ್ದೇವೆಂದು ಹೇಳಿದರು.

Recent Articles

spot_img

Related Stories

Share via
Copy link