ಅಲ್ಪ ಸಂಖ್ಯಾತರಿಗೆ ಭರ್ಜರಿ ಕೊಡುಗೆ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು:

    ಪ್ರಸಕ್ತ ಸಾಲಿನ ಕರ್ನಾಟಕ ಬಜೆಟ್‌   ಮಂಡನೆಯಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 16ನೇ ಬಜೆಟ್‌ನಲ್ಲಿ ಅಲ್ಪ ಸಂಖ್ಯಾತತಿಗೆ ಭರ್ಜರಿ ಕೊಡುಗೆ ಘೋಷಿಸಲಾಗಿದೆ. ಅದರಂತೆ ಜೈನ, ಬೌದ್ಧ ಹಾಗೂ ಸಿಖ್ಖ್ ಸಮುದಾಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲಿಡುವುದಾಗಿ ಅವರು ತಿಳಿಸಿದ್ದಾರೆ. ಅಲ್ಲದೆ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 250 ಕೋಟಿ ರೂ. ಘೋಷಿಸಲಾಗಿದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನ 20 ಲಕ್ಷ ರೂ.ಯಿಂದ 30 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ.

   ಇನ್ನು ಕೆಇಎ (KEA) ಮೂಲಕ ವೃತ್ತಿಪರ ಕೋರ್ಸ್‌ಗಳಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ಶೇ. 50 ರಷ್ಟು ಮರು ಪಾವತಿಸಲು ನಿರ್ಧರಿಸಲಾಗಿದೆ.

   ಎಲ್‌ಕೆಜಿಯಿಂದ ದ್ವಿತೀಯ ಪಿ.ಯು.ಸಿ.ವರೆಗಿನ ಎಲ್ಲ ತರಗತಿಗಳ ವಿದ್ಯಾರ್ಥಿಗಳು, ಆಯಾ ತರಗತಿಗೆ ತಕ್ಕಂತೆ ಕಲಿಕೆಯ ಮಟ್ಟವನ್ನು ಹೊಂದುವ ನಿಟ್ಟಿನಲ್ಲಿ 3 ವರ್ಷಗಳ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು. ಈ ಮೂಲಕ ಎಸ್‌.ಎಸ್‌.ಎಲ್‌.ಸಿ. ಮತ್ತು ಪಿಯುಸಿ ಪರೀಕ್ಷೆಗಳ ಫಲಿತಾಂಶದಲ್ಲಿ ಸುಧಾರಣೆ ತರಲಾಗುವುದು. ಇದಕ್ಕಾಗಿ, ಈ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳಲಾಗುವುದು:

  • ಪ್ರಸ್ತುತ 2,619 ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಟ್ಟು 90,195 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಈ ಯೋಜನೆಯನ್ನು 70 ಕೋಟಿ ರೂ. ವೆಚ್ಚದಲ್ಲಿ ಒಟ್ಟಾರೆ 5,000 ಶಾಲೆಗಳಿಗೆ ವಿಸ್ತರಿಸಲಾಗುವುದು.
  • ʻಕಲಿಕಾ ಚಿಲುಮೆʼ ಕಾರ್ಯಕ್ರಮದಡಿ ಒಂದರಿಂದ ಐದನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸಂತಸದಾಯಕ ಕಲಿಕಾ ಅನುಭವ ಒದಗಿಸುವುದು.
  • ʻಗಣಿತ ಗಣಕʼ ಕಾರ್ಯಕ್ರಮದಡಿ 3ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಫೋನ್‌ ಮೂಲಕ ವೈಯಕ್ತಿಕ ಬೋಧನೆಯೊಂದಿಗೆ ಬುನಾದಿ ಗಣಿತ ಕೌಶಲ್ಯವನ್ನು ಅಭಿವೃದ್ಧಿಪಡಿಸಿ ರಾಜ್ಯಾದ್ಯಂತ ವಿಸ್ತರಿಸುವುದು.
  • ʻಓದು ಕರ್ನಾಟಕʼ ಯೋಜನೆಯಡಿ 4 ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ ಬುನಾದಿ ಸಾಕ್ಷರತೆ ಹಾಗೂ ಸಂಖ್ಯಾಜ್ಞಾನದ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವುದು.
  • ಸರ್ಕಾರಿ ಶಾಲೆಗಳಲ್ಲಿ ಅತೀ ಕಡಿಮೆ ಕಲಿಕಾ ಸ್ತರದಲ್ಲಿರುವ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹೆಚ್ಚಿಸುವ ʻಮರುಸಿಂಚನʼ ಕಾರ್ಯಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸುವುದು.
  • ಕನ್ನಡ ಮತ್ತು ಆಂಗ್ಲ ಭಾಷೆಯನ್ನು ಆತ್ಮವಿಶ್ವಾಸದಿಂದ ಓದಲು ಹಾಗೂ ಗಣಿತದ ಆರಂಭಿಕ ಸಾಮರ್ಥ್ಯಗಳನ್ನು ಗಳಿಸಲು Ek-Step ಸಂಸ್ಥೆಯ ಸಹಯೋಗದೊಂದಿಗೆ AI ಆಧಾರಿತ ʻಕಲಿಕಾದೀಪʼ ಕಾರ್ಯಕ್ರಮವನ್ನು 2,000 ಶಾಲೆಗಳಿಗೆ ವಿಸ್ತರಿಸುವುದು.
  • ʻಜ್ಞಾನಸೇತುʼ ಕಾರ್ಯಕ್ರಮದಡಿ ಸರ್ಕಾರಿ ಶಾಲೆಗಳಲ್ಲಿ ವಿಜ್ಞಾನ ಮತ್ತು ಗಣಿತ ವಿಷಯಗಳ ಬೋಧನಾ ವಿಧಾನದಲ್ಲಿ ನಾವೀನ್ಯತೆ ಅಳವಡಿಸಿ, ಖಾನ್‌ ಅಕಾಡೆಮಿ ಸಹಯೋಗದಲ್ಲಿ ಯೋಜನೆ ರೂಪಿಸಲಾಗುವುದು. ರಾಜ್ಯದ 5,೦೦೦ ಸರ್ಕಾರಿ ಶಾಲೆಗಳ 20 ಲಕ್ಷ ವಿದ್ಯಾರ್ಥಿಗಳು ಹಾಗೂ 15,000 ಶಿಕ್ಷಕರು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ.
  • ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕೋಡಿಂಗ್‌ ಕಲಿಕೆ ಪರಿಚಯಿಸಲು ಅಗಸ್ತ್ಯ ಫೌಂಡೇಶನ್‌ ಸಹಯೋಗದೊಂದಿಗೆ ಐ-ಕೋಡ್‌ ಲ್ಯಾಬ್‌ ಸ್ಥಾಪಿಸಲಾಗುವುದು. ಈ ನಿಟ್ಟಿನಲ್ಲಿ ಪ್ರಸಕ್ತ ವರ್ಷ ICT ಸೌಲಭ್ಯವಿರುವ ಆಯ್ದ 63 ಶಾಲೆಗಳನ್ನು ಹಬ್‌ಗಳೆಂದು ಪರಿಗಣಿಸಿ 756 ಸ್ಪೋಕ್‌ ಶಾಲೆಗಳಿಗೆ ಅನುಕೂಲ ಕಲ್ಪಿಸುವುದು.
  • ʻವಿದ್ಯಾವಿಜೇತʼ ಕಾರ್ಯಕ್ರಮದಡಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ 25,000 ವಿದ್ಯಾರ್ಥಿಗಳಿಗೆ CET/NEET/JEE ತರಬೇತಿ ನೀಡಲಾಗಿದ್ದು, ಈ ಯೋಜನೆ ಮುಂದುವರಿಸಲು 5 ಕೋಟಿ ರೂ. ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದರು.

Recent Articles

spot_img

Related Stories

Share via
Copy link