ಎರಡನೇ ಅತಿದೊಡ್ಡ ಹಾಲು ಉತ್ಪಾದಕ ರಾಜ್ಯ ಕರ್ನಾಟಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು

   ಕರ್ನಾಟಕವು ಭಾರತದಲ್ಲಿ ಎರಡನೇ ಅತಿದೊಡ್ಡ ಹಾಲು ಉತ್ಪಾದಕ ರಾಜ್ಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೊದಲ ಸ್ಥಾನದಲ್ಲಿ ಗುಜರಾತ್‌ ಇದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್) ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ಬಿಡುಗಡೆ ಮಾಡಿ ಗುರುವಾರ ಮಾತನಾಡಿದ ಅವರು, ರಾಜ್ಯದ 16 ಹಾಲು ಒಕ್ಕೂಟಗಳು ಪ್ರತಿದಿನ ಸುಮಾರು 1 ಕೋಟಿ ಲೀಟರ್ ಹಾಲನ್ನು ಉತ್ಪಾದಿಸುತ್ತವೆ. ಕರ್ನಾಟಕವು ನವದೆಹಲಿಗೆ ಪ್ರತಿದಿನ 2.5 ಲಕ್ಷ ಲೀಟರ್ ಹಾಲನ್ನು ಪೂರೈಸಲು ಪ್ರಾರಂಭಿಸಿದ್ದು, ಆರು ತಿಂಗಳಲ್ಲಿ ಇದನ್ನು 5 ಲಕ್ಷ ಲೀಟರ್‌ಗೆ ಹೆಚ್ಚಿಸುವ ಯೋಜನೆ ಹೊಂದಿದೆ ಎಂದಿದ್ದಾರೆ.

    ಹಾಲಿನ ಉತ್ಪನ್ನಗಳಿಗೆ ಪ್ರಬಲ ಮಾರುಕಟ್ಟೆಯನ್ನು ಸೃಷ್ಟಿಸುವುದು ಡೇರಿ ಉದ್ಯಮದ ಬೆಳವಣಿಗೆ ಮತ್ತು ರೈತರ ಯೋಗಕ್ಷೇಮಕ್ಕೆ ನಿರ್ಣಾಯಕವಾಗಿದೆ. ಹೈನುಗಾರಿಕೆ ಕ್ಷೇತ್ರಕ್ಕೆ ನೀಡಿದ ಬಲವಾದ ಬೆಂಬಲವೇ ರಾಜ್ಯದ ಯಶಸ್ಸಿಗೆ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ. 

    ರೈತರಿಗೆ ನ್ಯಾಯಯುತ ಬೆಲೆ ಮತ್ತು ಅವರ ಉತ್ಪನ್ನಗಳಿಗೆ ಶಾಶ್ವತ ಮಾರುಕಟ್ಟೆಯನ್ನು ಖಚಿತಪಡಿಸಿಕೊಳ್ಳಲು ನಾವು ಹಾಲು ಉತ್ಪಾದಕರ ಸಂಘಗಳನ್ನು ರಚಿಸಿದ್ದೇವೆ. ರಾಜ್ಯವು ಪ್ರತಿನಿತ್ಯ 92-93 ಲಕ್ಷ ಲೀಟರ್ ಹಾಲನ್ನು ಉತ್ಪಾದಿಸುತ್ತಿದ್ದು, ಅದರಲ್ಲಿ 2.5 ಲಕ್ಷ ಲೀಟರ್ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರಕ್ಕೆ ಕಳುಹಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Recent Articles

spot_img

Related Stories

Share via
Copy link