ಬೆಂಗಳೂರು :
ಅನಾರೋಗ್ಯದಿಂದ ಬಳಲುತ್ತಿದ್ದಂತ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ ಚಿಕಿತ್ಸೆ ಫಲಕಾರಿಯಾಗದೇ ನಿಧರಾಗಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಸಿಎಂ ಉದಾಸಿ ಅವರನ್ನು 15 ದಿನದ ಹಿಂದೆ ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದು, ನಾಳೆ (ಬುಧವಾರ) ಹುಟ್ಟೂರಿಗೆ (ಹಾನಗಲ್ಲ) ಪಾರ್ಥಿವ ಶರೀರವನ್ನು ತರಲಾಗುವುದು. ಸಂಜೆ 5ಕ್ಕೆ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಸಿಎಂ ಉದಾಸಿ ಪುತ್ರ, ಸಂಸದ ಶಿವಕುಮಾರ್ ಉದಾಸಿ ಅವರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ