ಮುಡಾ ನಿವೇಶನ ವಾಪಸ್: ಪತ್ನಿ ನಿರ್ಧಾರ ಗೌರವಿಸಿ ಸಿಎಂ ಟ್ವೀಟ್

 ತುಮಕೂರು:

    ಮೂಡಾ ಪ್ರಕರಣದಲ್ಲಿ ಸೋಮವಾರ ಮಹತ್ವದ ಬೆಳವಣಿಗೆ ಯಾಗಿದ್ದು, ಸಿಎಂಗೆ ಕಾನೂನು ಸಂಕಷ್ಟ ತಂದೊಡ್ಡಿದ್ದ ಮುಡಾದಿಂದ ಪರಿಹಾರ ರೂಪದಲ್ಲಿ ಪಡೆಯಲಾದ 14ನಿವೇಶನಗಳನ್ನು ಸಿಎಂ ಪತ್ನಿ ವಾಪಸ್ ಮಾಡುತ್ತಿರುವುದಾಗಿ ಸಿಎಂ ಪತ್ನಿ ಪಾರ್ವತಿ ಅವರು ಮೂಡಾಗೆ ಭಾವನಾತ್ಮಕ ಪತ್ರಬರೆದಿದ್ದಾರೆ.

  ತಮ್ಮ ಪತ್ನಿ ಬರೆದ ಪತ್ರವನ್ನು ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪತ್ನಿ ನಿರ್ಧಾರ ಆಶ್ಚರ್ಯ ತಂದಿದೆ. ನೋವಿನಿಂದ ಅವರು ಈ ತೀರ್ಮಾನ ಕೈಗೊಂಡಿದ್ದಾರೆ. ಅವರ ನಿರ್ಧಾರ ಗೌರವಿಸುತ್ತೇನೆ ಎಂದಿದ್ದಾರೆ. ಸಿಎಂ ತಮ್ಮ ಪೋಸ್ಟ್ ನಲ್ಲಿ “ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನೀಡಿದ್ದ ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ.

ಮೂಡ ಆಯುಕ್ತರು ಶ್ರೀಮತಿ ಪಾರ್ವತಿ ಸಿದ್ದರಾಮಯ್ಯನವರು ಬರೆದಿರುವ ಪತ್ರ

ನನ್ನ ವಿರುದ್ದ ರಾಜಕೀಯ ದ್ವೇಷ ಸಾಧನೆಗಾಗಿ ವಿರೋಧ ಪಕ್ಷಗಳು ಸುಳ್ಳು ದೂರನ್ನು ಸೃಷ್ಟಿಸಿ ನನ್ನ ಕುಟುಂಬವನ್ನು ವಿವಾದಕ್ಕೆ ಎಳೆದು ತಂದಿರುವುದು ರಾಜ್ಯದ ಜನತೆಗೂ ತಿಳಿದಿದೆ.

ಈ ಅನ್ಯಾಯಕ್ಕೆ ತಲೆಬಾಗದೆ ಹೋರಾಟ ಮಾಡಬೇಕೆಂಬುದು ನನ್ನ ನಿಲುವಾಗಿತ್ತು. ಆದರೆ ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ.

ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ ನನಗೆ ವಿಷಾದ ಇದೆ.

ಹೀಗಿದ್ದರೂ ನಿವೇಶನಗಳನ್ನು ಹಿಂದಿರುಗಿಸಿದ ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆಗೌರವಿಸುತ್ತೇನೆ ಎಂದಿದ್ದಾರೆ.

Recent Articles

spot_img

Related Stories

Share via
Copy link
Powered by Social Snap