ಕಂಡಕ್ಟರ್‌ ಆಗಲಿದ್ದಾರೆ ಸಿಎಂ…!

ಬೆಂಗಳೂರು

     ಜೂನ್‌ 11 ರಂದು ಶಕ್ತಿ ಯೋಜನೆಗೆ ವಿನೂತನವಾಗಿಯೇ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಭಾನುವಾರದಂದು ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದು, ಮಹಿಳೆಯರಿಗೆ ಟಿಕೆಟ್‌ ನೀಡುವ ಮೂಲಕ ಮಹಿಳೆಯರ ಉಚಿತ ಬಸ್‌ ಪ್ರಯಾಣಕ್ಕೆ ಹಸಿರು ನಿಶಾನೆಯನ್ನ ಸಿಎಂ ಸಿದ್ದರಾಮಯ್ಯ ತೋರಲಿದ್ದಾರೆ.

      ಬಿಎಂಟಿಸಿಯ ರೂಟ್‌ ನಂಬರ್‌ 43ರ ಬಸ್‌ನಲ್ಲಿ ಭಾನುವಾರ ಕಂಡಕ್ಟರ್‌ ಆಗುವ ಸಿದ್ದರಾಮಯ್ಯ ಮಹಿಳಾ ಪ್ರಯಾಣಿಕರ ಬಳಿ ತೆರಳಿ ಯಾರಲ್ಲಿ ಟಿಕೆಟ್ ಟಿಕೆಟ್ ಎನ್ನುತ್ತಾ ಉಚಿತ ಟಿಕೆಟ್‌ ವಿತರಿಸಲಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ ಮೊಟ್ಟಮೊದಲ ಯೋಜನೆಯಾಗಿ ಶಕ್ತಿ ಯೋಜನೆ ಜೂನ್‌ 11ರಂದು ಜಾರಿಗೆ ಬರಲಿದೆ. 

   ಬಳಿಕ ವಿಧಾನಸೌಧದಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಯೋಜನೆಗೆ ಅಧಿಕೃತ ಚಾಲನೆ ನೀಡಲಿದ್ದಾರೆ. ಈ ವೇಳೆ ಶಕ್ತಿ ಯೋಜನೆಯ ಲೋಗೋ ಹಾಗೂ ಸ್ಮಾರ್ಟ್‌ ಕಾರ್ಡ್‌ ಕೂಡ ಬಿಡುಗಡೆಯಾಗಲಿದೆ. ಸಿದ್ದರಾಮಯ್ಯ ಅವರಿಗೆ ಈ ಸಮಯದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸಾಥ್‌ ನೀಡಲಿದ್ದಾರೆ.

     ಏಕಕಾಲದಲ್ಲಿ ಶಕ್ತಿ ಯೋಜನೆ ಚಾಲನೆ ಇನ್ನೂ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಮುಖ್ಯಸ್ಥರು, ಸಚಿವರು, ಶಾಸಕರು ಶಕ್ತಿ ಯೋಜನೆಗೆ ಏಕಕಾಲದಲ್ಲಿ ಚಾಲನೆ ನೀಡಲಿದ್ದಾರೆ. ಅಲ್ಲದೇ ಶಕ್ತಿ ಯೋಜನೆಗೆ ಮಾತ್ರ ಸೀಮಿತವಾಗಿಲ್ಲ. ಉಳಿದ ನಾಲ್ಕು ಗ್ಯಾರಂಟಿ ಯೋಜನೆಗಳ ಉದ್ಘಾಟನೆ ವಿಶೇಷವಾಗಿರಬೇಕು ಎಂದು ತಿಳಿಸಿದ್ದಾರೆ. ಕೇವಲ ರಾಜಧಾನಿಯಲ್ಲಿ ಮಾತ್ರ ಕಾರ್ಯಕ್ರಮಗಳ ಉದ್ಘಾಟನೆಯಾಗದೇ ಐದು ವಿಭಾಗೀಯ ಕೇಂದ್ರಗಳಲ್ಲಿ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲು ಚಿಂತಿಸಲಾಗಿದೆ. 

     ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ನೀಡುವ ಶಕ್ತಿ ಯೋಜನೆ ಬೆಂಗಳೂರಿನಲ್ಲಿ ಉದ್ಘಾಟನೆಯಾದರೆ, ಕುಟುಂಬದ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಮೈಸೂರಿನಲ್ಲಿ ಜಾರಿಗೆ ಬರಲಿದೆ. ಕುಟುಂಬದ ಯಜಮಾನಿಗೆ ಮಾಸಿಕ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆ ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಉದ್ಘಾಟನೆಯಾಗಲಿದೆ.

     200 ಯೂನಿಟ್‌ವರೆಗೂ ಉಚಿತವಾಗಿ ವಿದ್ಯುತ್‌ ನೀಡುವ ಗೃಹಜ್ಯೋತಿ ಯೋಜನೆಗೆ ಕಲಬುರಗಿಯಲ್ಲಿ ಹಸಿರು ನಿಶಾನೆ ತೋರುವ ಸಾಧ್ಯತೆಯಿದೆ. ನಿರುದ್ಯೋಗಿ ಪದವೀಧರರು ಹಾಗೂ ಡಿಪ್ಲೋಮಾ ಹೊಂದಿರುವವರಿಗೆ ಭತ್ಯೆ ನೀಡುವ ಯುವನಿಧಿ ಯೋಜನೆ ಮಂಗಳೂರಲ್ಲಿ ಉದ್ಘಾಟನೆಯಾಗಲಿದೆ ಎಂದು ಹೇಳಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link