ತುಮಕೂರು : ಮಾ.5ರಂದು ನಗರಕ್ಕೆ ಸಿಎಂ

ತುಮಕೂರು

     ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಸರ್ಕಾರಿ ಯೋಜನೆಗಳ ಫಲಾನುಭವಿಗಳನ್ನು ಸೆಳೆಯಲು ಭರ್ಜರಿ ಪ್ಲಾನ್ ಮಾಡುತ್ತಿರುವ ರಾಜ್ಯ ಸರ್ಕಾರ ಪ್ರತೀ ಜಿಲ್ಲೆಯಲ್ಲೂ ಸರ್ಕಾರಿ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶ ನಡೆಸಲು   ಮಾಡಿದೆ.

     ಅದರಂತೆ ತುಮಕೂರು ಜಿಲ್ಲೆಯಲ್ಲೂ ಇದೇ ಮಾ.5ರಂದು ಜಿಲ್ಲಾ ಮಟ್ಟದ ಫಲಾನುಭವಿಗಳ ಸಮಾವೇಶವನ್ನು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬೃಹತ್ ಸಮಾವೇಶವನ್ನು ಉದ್ಘಾಟಿಸುತ್ತಿದ್ದಾರೆ.

     ಈ ಸಂಬಂಧ ಗುರುವಾರ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಸಿದ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಅವರು ಸಮಾವೇಶದಲ್ಲಿ ವಿವಿಧ ಇಲಾಖೆಯ ಯೋಜನೆಗಳಡಿ ಆಯ್ಕೆಯಾಗಿರುವ ಸುಮಾರು 25000 ಅರ್ಹ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ನೀಡಲಾಗುವುದು.

    ಸಮಾವೇಶದಲ್ಲಿ ಕೃಷಿ, ತೋಟಗಾರಿಕೆ, ಸಮಾಜ ಕಲ್ಯಾಣ, ರೇಷ್ಮೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮೀನುಗಾರಿಕೆ, ಕಾರ್ಮಿಕ ಇಲಾಖೆಗಳು ಸೇರಿದಂತೆ ವಿವಿಧ ನಿಗಮಗಳು ನೀಡುವ ಸಾಲ-ಸಹಾಯಧನ, ರೈತ ವಿದ್ಯಾನಿಧಿ, ವಿದ್ಯಾಸಿರಿ, ಗಂಗಾ ಕಲ್ಯಾಣ, ವಿದ್ಯಾರ್ಥಿವೇತನ, ಪಿಎಂ ಕಿಸಾನ್, ಪ್ರೋತ್ಸಾಹಧನ, ಕಾನೂನು ತರಬೇತಿ ಹಾಗೂ ಮತ್ತಿತರ ಸೌಲಭ್ಯಗಳನ್ನು ಮುಖ್ಯಮಂತ್ರಿಗಳು ಜಿಲ್ಲೆಯ ಫಲಾನುಭವಿಗಳಿಗೆ ವಿತರಿಸಲಿದ್ದು, ಜಿಲ್ಲೆಯ ಎಲ್ಲಾ ತಾಲೂಕಿನ ಫಲಾನುಭವಿಗಳನ್ನು ಕರೆ ತರುವ ಜವಾಬ್ದಾರಿಯನ್ನು ಆಯಾ ಇಲಾಖೆಯ ಅಧಿಕಾರಿಗಳಿಗೆ ವಹಿಸಿದರು.

     ಫಲಪುಷ್ಪ ಪ್ರದರ್ಶನ:ಸಮಾವೇಶದ ಅಂಗವಾಗಿ ಮಾರ್ಚ್ 5 ರಿಂದ 8ರವರೆಗೆ ತೋಟಗಾರಿಕಾ ಇಲಾಖೆಯಿಂದ ಫಲಪುಷ್ಟ ಪ್ರದರ್ಶನ ಏರ್ಪಡಿಸಲು ತೋಟಗಾರಿಕೆ ಉಪನಿರ್ದೇಶಕ ರಘು ಅವರಿಗೆ ಸೂಚನೆ ನೀಡಿದರು. ಅಲ್ಲದೆ ಮಹಿಳಾ ದಿನಾಚರಣೆ ಪ್ರಯುಕ್ತ ಮಾರ್ಚ್ 5 ರಿಂದ 8ರವರೆಗೆ ವಿಶೇಷ ವಸ್ತುಪ್ರದರ್ಶವನ್ನು ಏರ್ಪಡಿಸಲಾಗುವುದು ಎಂದು ತಿಳಿಸಿದರು.

    ಜನ ಕರೆತರಲು 600 ಸಾರಿಗೆ ವ್ಯವಸ್ಥೆ: ಫಲಾನುಭವಿಗಳನ್ನು ಸಮಾವೇಶಕ್ಕೆ ಎಲ್ಲ ತಾಲೂಕುಗಳಿಂದ ಕರೆತರಲು 600 ಸಾರಿಗೆ ವ್ಯವಸ್ಥೆ ಮಾಡಬೇಕೆಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಗಜೇಂದ್ರ ಅವರಿಗೆ ನಿರ್ದೇಶನ ನೀಡಿದರು.

ಪಾರ್ಕಿಂಗ್‌ಗೆ ಕ್ರಮ:

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ಕುಮಾರ್ ಶಹಾಪೂರವಾಡ್ ಮಾತನಾಡಿ ಕಾರ್ಯಕ್ರಮಕ್ಕೆ ಬರುವ ವಾಹನಗಳಿಗಾಗಿ ನಿಗಧಿತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆಗೆ ಕ್ರಮವಹಿಸಲಾಗುವುದು ಎಂದು ಹೇಳಿದರು.

    ಸಭೆಯಲ್ಲಿ ನಗರ ಶಾಸಕ ಜ್ಯೋತಿ ಗಣೇಶ್ ಅವರು ಕಾರ್ಯಕ್ರಮ ಯಶಸ್ವಿಗಾಗಿ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು. ಉಪವಿಭಾಗಾಧಿಕಾರಿ ಹೆಚ್. ಶಿವಪ್ಪ, ಪೊಲೀಸ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕೃಷಿ, ತೋಟಗಾರಿಕೆ, ರೇಷ್ಮೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ವಿಕಲಚೇತರ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪಶು ಸಂಗೋಪಾನಾ, ಕಾರ್ಮಿಕ ಇಲಾಖೆ, ವಿವಿಧ ನಿಗಮಗಳು, ಜಿಲ್ಲಾ ಪಂಚಾಯತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link