ಮನೆ ಮನೆಗೆ ನಲ್ಲಿ ನೀರು : ಸಚಿವರಿಂದ ಗುದ್ದಲಿ ಪೂಜೆ

 ಚಿಕ್ಕನಾಯಕನಹಳ್ಳಿ :

      ತಾಲ್ಲೂಕಿನ ಮಲಗೊಂಡನಹಳ್ಳಿಯಲ್ಲಿ ಗುರುವಾರ ಜಲ ಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ನಲ್ಲಿಗಳ ಮೂಲಕ ನೀರು ಸರಬರಾಜು ಮಾಡುವ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಗುದ್ದಲಿ ಪೂಜೆ ನೆರವೇರಿಸಿದರು.

      ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜಲ ಜೀವನ್ ಮಿಷನ್ ವತಿಯಿಂದ ಮಲಗೊಂಡನಹಳ್ಳಿ ಗ್ರಾಮದಲ್ಲಿ 29.4 ಲಕ್ಷ ರೂ ಗಳಲ್ಲಿ 180 ಮನೆಗಳಿಗೆ ನಲ್ಲಿಗಳ ಮೂಲಕ ನೀರಿನ ವ್ಯವಸ್ಥೆ ಮಾಡಲಾಗುವುದು, ಅದೇ ಗ್ರಾಮದ ಮಲಗೊಂಡನಹಳ್ಳಿಯಲ್ಲಿ ಸಿ.ಎಸ್.ಆರ್ ಯೋಜನೆಯಡಿ 12 ಲಕ್ಷ ವೆಚ್ಚದಲ್ಲಿ ಶುದ್ದ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದ ನಂತರ ಕಸಬಾ ಹೋಬಳಿಯ ನವಿಲೆ ಗ್ರಾಮದಲ್ಲಿ 30 ಲಕ್ಷ ರೂ ವೆಚ್ಚದಲ್ಲಿ 50 ಸಾವಿರ ಲೀಟರ್ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು.

      ಈ ಸಂದರ್ಭದಲ್ಲಿ ಜೆ.ಸಿ.ಪುರ ಗ್ರಾಮ ಪಂಚಾಯ್ತಿ ಅಧ್ಯಕ್ಷ ಎಂ.ಪಿ.ಪ್ರಸನ್ನಕುಮಾರ್, ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕ ತಿಮ್ಲಾಪುರ ಶಂಕರಲಿಂಗಪ್ಪ, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ವಸಂತ್ ಕುಮಾರ್, ಕುಪ್ಪೂರು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಚಿಕ್ಕೇಗೌಡ, ಶಿವಗಂಗಮ್ಮ, ಜಯಮ್ಮ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link