ಚಿ.ನಾ.ಹಳ್ಳಿ :
ತಾಲ್ಲೂಕಿನ ಮುಜರಾಯಿ ದೇವಾಲಯಗಳ ಅರ್ಚಕರ ಸಭೆಯನ್ನು ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ನಡೆಸಲಾಯಿತು.
ಪರಿಶಿಷ್ಟಜಾತಿ ಹಾಗೂ ಅನುಸೂಚಿತ ಪಂಗಡಗಳ ಕುಂದು ಕೊರತೆ ಸಭೆಯಲ್ಲಿ ಹಲವು ದಲಿತ ಮುಖಂಡರು ತಾಲ್ಲೂಕಿನ ಕೆಲವು ಮುಜರಾಯಿ ದೇವಾಲಯಗಳಲ್ಲಿ ಜಾತಿ ತಾರತಮ್ಯ ನಡೆಯುತ್ತಿದೆ ಎಂಬ ದೂರಿನ ಹಿನ್ನಲೆಯಲ್ಲಿ ಸಿಪಿಐ ನಿರ್ಮಲ ಅವರ ಅಧ್ಯಕ್ಷತೆಯಲ್ಲಿ ಮುಜರಾಯಿ ದೇವಾಲಯಗಳ ಅರ್ಚಕರ ಸಭೆ ಕರೆಯಲಾಗಿತ್ತು.
ಈ ಸಂದರ್ಭದಲ್ಲಿ ಸಿಪಿಐ ನಿರ್ಮಲ ಅವರು ಮಾತನಾಡಿ, ಸರ್ಕಾರದ ಮಾರ್ಗಸೂಚಿಯಂತೆ ದೇವಾಲಯಗಳಲ್ಲಿ ಯಾವುದೇ ಜಾತಿ ತಾರತಮ್ಯಕ್ಕೆ ಅವಕಾಶವಿಲ್ಲ, ದೇವಾಲಯ ಪ್ರವೇಶಕ್ಕೆ ಹಾಗೂ ಪೂಜಾ ಕಾರ್ಯದಲ್ಲಿ ಭಾಗಿಯಾಗಲು ಎಲ್ಲಾ ವರ್ಗದವರಿಗೂ ಸಮಾನ ಹಕ್ಕುಗಳನ್ನು ಸಂವಿಧಾನ ಕಲ್ಪಿಸಿದ್ದು, ಜಾತಿ ತಾರತಮ್ಯವಾಗಲಿ, ಅಸ್ಪೃಷ್ಯತೆ ಆಚರಣೆ, ಪ್ರವೇಶ ನಿರ್ಬಂಧದಂತಹ ಪ್ರಕರಣಗಳು ಕಂಡು ಬಂದರೆ ಶಿಕ್ಷಾರ್ಹ ಅಪರಾಧವಾಗಲಿದೆ, ಇಂತಹ ಯಾವುದೇ ಕೃತ್ಯಗಳಿಗೆ ಅವಕಾಶ ನೀಡದಂತೆ ಧಾರ್ಮಿಕ ಕೇಂದ್ರಗಳನ್ನು ಮುಕ್ತವಾಗಿಡಿ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಪಿಎಸ್‍ಐ ಹರೀಶ್ ಹಾಗೂ ಸಿಬಂದಿಗಳು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
