ಬೆಂಗಳೂರು :
ಮುಂಗಾರು, ಚಂಡಮಾರುತದಿಂದಾಗಿ ಕರ್ನಾಟಕದ್ಯಂತ ಡಿಸೆಂಬರ್ 20ರವರೆಗೂ ಆಗಾಗ ಮಳೆಯಾಗುತ್ತಲೇ ಇತ್ತು. ಇದೀಗ ಶೀತ ಗಾಳಿ ಶುರುವಾಗಿದ್ದುರು ಚಳಿಗಾಲದ ಅನುಭವವಾಗತೊಡಗಿದೆ. ಜನವರಿ ಮೊದಲ ವಾರದವರೆಗೂ ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರದಲ್ಲೂ ಚಳಿಯ ವಾತಾವರಣವಿರಲಿದೆ.
ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲೂ ಒಣಹವೆ ಇರಲಿದೆ. ವಿಜಯಪುರದಲ್ಲಿ 15.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 26.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ .