ಬೆಂಗಳೂರು:
ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದೆ. ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಆರ್ಎಂಸಿ ಯಾರ್ಡ್ ಠಾಣಾ ವ್ಯಾಪ್ತಿಯಲ್ಲಿ ಬೆಳಗ್ಗೆ 4.30ರ ಸುಮಾರಿಗೆ ಘಟನೆ ನಡೆದಿದೆ. ಕಟ್ಟಡ ಕುಸಿಯುವ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಬಿಹಾರ ಮೂಲದ ರಾಕೇಶ್ ಹಾಗೂ ರಾಹುಲ್ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಎಂಟು ಜನರಿಗೆ ಗಂಭೀರ ಗಾಯಗಳಾಗಿವೆ.
12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ನಿರ್ಮಾಣ ಹಂತದ ಕಟ್ಟಡ ಕುಸಿತದ ನಂತರ ಗುತ್ತಿಗೆದಾರ ಮತ್ತು ಇಂಜಿನಿಯರ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ವೇಳೆ ಕಟ್ಟಡ ನಿರ್ಮಾಣಕ್ಕೆ ಕಾರ್ಮಿಕ ಇಲಾಖೆಯಿಂದ ಅನುಮತಿ ಪಡೆಯದೆ ಕಾಮಗಾರಿ ಆರಂಭಿಸಿರುವುದು ತಿಳಿದುಬಂದಿದೆ. ಈ ಸಂಬಂಧ ಕಾರ್ಮಿಕ ಇಲಾಖೆ ಗುತ್ತಿಗೆದಾರ ಮತ್ತು ಇಂಜಿನಿಯರಿಂಗ್ ಸಂಸ್ಥೆ ಮೇಲೆ ದೂರು ದಾಖಲಿಸಿದೆ.
