ಉಡುಪಿ:
ಕೇರಳ- ಕರ್ನಾಟಕ ಗಡಿಭಾಗದ ಪ್ರದೇಶಗಳಲ್ಲಿ ಶಂಕಿತ ನಕ್ಸಲರು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ, ಪೊಲೀಸರು ಕೂಂಬಿಂಗ್ ಕಾರ್ಯಾಚರಣೆ ಪ್ರಾರಂಭಿಸಿದ್ದು, ಮುಂಬರುವ ಲೋಕಸಭೆ ಚುನಾವಣೆಗೆ ಸಾಕಷ್ಟು ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಕರ್ನಾಟಕದ 28 ಕ್ಷೇತ್ರಗಳಿಗೆ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ.
ಪಿಟಿಐ ಜೊತೆಗೆ ಮಾತನಾಡಿದ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಕೆ. ಅರುಣ್, ಕೆಲವು ದಿನಗಳ ಹಿಂದೆ ಕರ್ನಾಟಕ-ಕೇರಳ ಗಡಿಯಲ್ಲಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಶಂಕಿತ ನಕ್ಸಲರು ಕಾಣಿಸಿಕೊಂಡಿದ್ದಾರೆ. ಸುಮಾರು ಐದಾರು ವರ್ಷಗಳ ಹಿಂದೆ, ಕರ್ನಾಟಕದ ಈ ಭಾಗದಲ್ಲಿ ಯಾವುದೇ ನಕ್ಸಲ್ ದೃಶ್ಯಗಳು ಇರಲಿಲ್ಲ ಎಂದರು.
” ನಕ್ಸಲ್ ನಿಗ್ರಹ ಪಡೆಗಳೊಂದಿಗೆ ಸಮನ್ವಯಗೊಳಿಸಿದ್ದು, ನೆರೆಯ ಪ್ರದೇಶಗಳಲ್ಲಿ ಕೂಂಬಿಂಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದೇವೆ. ಸಂಬಂಧಪಟ್ಟ ಜಿಲ್ಲೆಯಲ್ಲಿ ನಕ್ಸಲ್ ನಿಗ್ರಹ ದಳ ಆರಂಭಿಸಿದ್ದು, ಯಾವುದೇ ನಕ್ಸಲ್ ಚಟುವಟಿಕೆಗಳ ಬಗ್ಗೆ ಸ್ಥಳೀಯ ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ಅವರು ಹೇಳಿದರು. .