ಬೆಂಗಳೂರು:
ನಿಗದಿತ ಸಮಯಕ್ಕೆ ಸದನಕ್ಕೆ ಆಗಮಿಸಿದ್ದ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ಕೌಜಲಗಿ ಮಹಾಂತೇಶ್, ಎಸ್ ಸುರೇಶ್ ಕುಮಾರ್, ಪ್ರದೀಪ್ ಈಶ್ವರ್, ಎಸ್ ಆರ್ ಶ್ರೀನಿವಾಸ್, ಲತಾ ಮಲ್ಲಿಕಾರ್ಜುನ, ಶಿವಲಿಂಗೇಗೌಡ ಸೇರಿದಂತೆ ಇತರ ಶಾಸಕರ ಹೆಸರು ಓದಿದ ಸ್ಪೀಕರ್ ಶಾಸಕರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ವೇಳೆ ಕಲಾಪದ ಎಲ್ಲಾ ದಿನಗಳು ನಿಗದಿತ ಸಮಯಕ್ಕೆ ಸದನಕ್ಕೆ ಬಂದವರಿಗೆ ಬಹುಮಾನ ನೀಡಲಾಗುವುದು ಎಂದು ಸ್ಪೀಕರ್ ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರೊಬ್ಬರು, ನಿಗದಿತ ಸಮಯಕ್ಕೆ ಸದನಕ್ಕೆ ಆಗಮಿಸಿದ ಶಾಸಕರಿಗೆ ಬಹುಮಾನ ಕೊಟ್ಟರೆ ತಪ್ಪು ಸಂದೇಶ ಹೋಗುತ್ತದೆ. ಬಹುಮಾನ ಘೋಷಣೆ ಬದಲಾಗಿ ಸರ್ಟಿಫಿಕೇಟ್ ಕೊಡಲು ಮನವಿ ಮಾಡಿದರು. ಇದಕ್ಕೆ ಸ್ಪೀಕರ್ ಸಮ್ಮತಿ ಸೂಚಿಸಿದರು.
