ಜೂನ್ 20 ಕ್ಕೆ ‘ಕಾಮೆಡ್-ಕೆ’ ಪ್ರವೇಶ ಪರೀಕ್ಷೆಗೆ ಡೇಟ್ ಫಿಕ್ಸ್ !!

ಬೆಂಗಳೂರು :

     ಖಾಸಗಿ ಕಾಲೇಜುಗಳಲ್ಲಿನ ಇಂಜಿನಿಯರಿಂಗ್ ಸೀಟುಗಳ ಭರ್ತಿಗಾಗಿ ನಡೆಸಲಾಗುವ ಕಾಮೆಡ್-ಕೆ ಪ್ರವೇಶ ಪರೀಕ್ಷೆಗೆ ದಿನಾಂಕ ಪ್ರಕಟಿಸಲಾಗಿದೆ.  

     ಈ ಕುರಿತಂತೆ ಇಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದಂತ ಕಾಮೆಡ್-ಕೆ ಕಾರ್ಯಕಾರಿ ಕಾರ್ಯದರ್ಶಿ ಡಾ.ಕುಮಾರ್ ಅವರು, ಈ ಬಾರಿಯ ಕಾಮೆಡ್-ಕೆ ಪರೀಕ್ಷೆಯನ್ನು ಜೂನ್ 20ರಂದು ನಡೆಸಲಾಗುತ್ತದೆ. 150ಕ್ಕೂ ಹೆಚ್ಚು ನಗರಗಳು, 400ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಲ್ಲಿ ಕಾಮೆಡ್-ಕೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.

     ಇನ್ನೂ ಮುಂದುವರೆದು ಮಾತನಾಡಿದಂತ ಅವರು, ಜೂನ್ 20ರಂದು ನಡೆಯಲಿರುವಂತ ಕಾಮೆಡ್-ಕೆ ಪ್ರವೇಶ ಪರೀಕ್ಷೆಗಾಗಿ ಅರ್ಹ ವಿದ್ಯಾರ್ಥಿಗಳು ಮಾರ್ಚ್ 22 ರಿಂದ ಮೇ.20ರವರೆಗೆ www.comedk.org ಜಾಲತಾಣದ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂಬುದಾಗಿ ಮಾಹಿತಿ ನೀಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link